ಬೆಂಗಳೂರು : ಕರ್ನಾಟಕದ 11 ಜಿಲ್ಲೆಗಳಲ್ಲಿ ದಿಢೀರ್ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ರಾಜ್ಯದಲ್ಲಿ ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ.

ದಕ್ಷಿಣ ಕನ್ನಡ , ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ