News Karnataka Kannada
Saturday, May 11 2024
ಬೆಂಗಳೂರು

ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ಮತ್ತೆ 2ನೇ ಸ್ಥಾನ

tiger
Photo Credit : Twitter

ಬೆಂಗಳೂರು: ದೇಶದಲ್ಲಿ ಹುಲಿಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿದ ಪರಿಣಾಮವಾಗಿ ಕಳೆದ 4 ವರ್ಷದಲ್ಲಿ ಹುಲಿಗಳ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗಿದೆ. ದೇಶದಲ್ಲಿ 2018ರಲ್ಲಿ 2,197 ಇದ್ದ ಹುಲಿಗಳ ಸಂಖ್ಯೆಯು 2022ರ ವೇಳೆಗೆ 3,682ಕ್ಕೆ ಏರಿಕೆಯಾಗಿದೆ.

ಅದರಂತೆ, 785 ಹುಲಿಗಳನ್ನು ಹೊಂದಿರುವ ಮಧ್ಯಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ ಎನಿಸಿದರೆ, ಕರ್ನಾಟಕವು 563 ಹುಲಿಗಳೊಂದಿಗೆ ಎರಡನೇ ಸ್ಥಾನದಲ್ಲೇ ಮುಂದುವರಿದಿದೆ.

ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಭಾರತದಲ್ಲಿರುವ ಹುಲಿಗಳ ಸಂಖ್ಯೆ ಕುರಿತು ವರದಿ ಬಿಡುಗಡೆ ಮಾಡಿದೆ. 2018ರಿಂದ 2022ರ ಅವಧಿಯಲ್ಲಿ ಹುಲಿಗಳ ಸಂಖ್ಯೆಯು ಶೇ.ಗಣನೀಯವಾಗಿ ಏರಿಕೆಯಾಗಿದೆ. ದೇಶದ ನಾಲ್ಕು ರಾಜ್ಯಗಳಲ್ಲೇ ಅಂದರೆ, ಮಧ್ಯಪ್ರದೇಶ (785), ಕರ್ನಾಟಕ (563), ಉತ್ತರಾಖಂಡ (560) ಹಾಗೂ ಮಹಾರಾಷ್ಟ್ರ (444)ದಲ್ಲಿಯೇ ದೇಶದ ಒಟ್ಟು ಹುಲಿಗಳ ಸಂಖ್ಯೆಯಲ್ಲಿ ಶೇ.50ರಷ್ಟು ಹುಲಿಗಳಿವೆ ಎಂದು ವರದಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು