ನೆಲಮಂಗಲ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಗಡೆ ಬಂದು ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆರು ತಿಂಗಳಲ್ಲಿ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.