Bengaluru 23°C
Ad

ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಹೆಚ್‌ಡಿಕೆ

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಸುಪ್ರಭಾತ ಸೇವೆಗಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಸುಪ್ರಭಾತ ಸೇವೆಗಾಗಿ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲು ವೆಂಕಟೇಶ್ವರನ ಆಶೀರ್ವಾದ ಪಡೆಯಲು ನಾನು ಬಂದಿದ್ದೇನೆ ಎಂದು ಹೇಳಿದರು.

ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಶುಕ್ರವಾರ ಕುಮಾರಸ್ವಾಮಿ ಬೆಂಗಳೂರಿಗೆ ಶುಕ್ರವಾರ ಆಗಮಿಸಿದರು. ತಿರುಪತಿಯಿಂದ ಇಂದು ಮರಳಿದ ಬಳಿಕ ಸ್ಪೀಕರ್‌ ಕಚೇರಿಗೆ ತೆರಳಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad