Ad

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

Rain (2)

ಬೆಂಗಳೂರು: ಇಂದು (ಜೂನ್‌ 24) ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.

Ad
300x250 2

ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ಬೆಳಗಾವಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಕಲಬುರಗಿ, ರಾಯಚೂರು, ಕೋಲಾರ, ಚಾಮರಾಜನಗರ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಇಂದು ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆ ಹಿನ್ನೆಲೆ ಉತ್ತರ ಒಳನಾಡಿನ ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಫೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಫೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad
Ad
Nk Channel Final 21 09 2023
Ad