ರೈಲ್ವೇಯ 9,000 ಹುದ್ದೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ

ಬೆಂಗಳೂರು: ದೇಶದಲ್ಲಿ ಅತೀ ಹೆಚ್ಚು ಉದ್ಯೋಗ ಒದಗಿಸುವ ಸಂಸ್ಥೆಗಳಲ್ಲಿ ಭಾರತೀಯ ರೈಲ್ವೇಯೂ ಒಂದಾಗಿದೆ. ಇದೀಗ ರೈಲ್ವೇ ನೇಮಕಾತಿ ಮಂಡಳಿ ದೇಶಾದ್ಯಂತ ಇರುವ ಬರೋಬ್ಬರಿ 9,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಟೆಕ್ನಿಷಿಯನ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 9ರಂದು ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್‌ 8 ನಾಳೆ ಕೊನೆ ದಿನವಾಗಿದೆ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:
ಟೆಕ್ನಿಷಿಯನ್‌ ಗ್ರೇಡ್‌-I ಸಿಗ್ನಲ್‌ – 1,100 ಹುದ್ದೆ ಮತ್ತು ಟೆಕ್ನಿಷಿಯನ್‌ ಗ್ರೇಡ್‌- III ಸಿಗ್ನಲ್‌ -7,900 ಹುದ್ದೆಗಳಿವೆ. ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಡಿಪ್ಲೋಮಾ ತೇರ್ಗಡೆಯಾಗಿರಬೇಕು ಅಥವಾ ಮಾನ್ಯತೆ ಹೊಂದಿರುವ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ
ಅರ್ಜಿ ಸಲ್ಲಿಕೆಗೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಯೋಧರು ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ
ಎಸ್‌ಸಿ / ಎಸ್‌ಟಿ, ಮಾಜಿ ಯೋಧರು, ಪಿಡಬ್ಲ್ಯುಬಿಡಿ, ಮಹಿಳೆಯರು, ತೃತೀಯ ಲಿಂಗಿಗಳು, ಆರ್ಥಿಕವಾಗಿ ದುರ್ಬಲರಾಗಿರುವವರು 250 ರೂ. ಮತ್ತು ಉಳಿದ ವರ್ಗದ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ವಿವಿಧ ಹಂತಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಮೊದಲಿಗೆ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಸ್ಟೇಜ್‌ -I, II ನಡೆಯಲಿದೆ. ಬಳಿಕ ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಆಯೋಜಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಸಿಬಿಟಿ I ಆನ್‌ಲೈನ್‌ ಪರೀಕ್ಷೆಯಾಗಿದ್ದು ಇದರಲ್ಲಿ ಸಾಮಾನ್ಯ ಜ್ಞಾನ, ಗಣಿತ, ರೀಸನಿಂಗ್‌, ಮೂಲ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ.

ಸಿಬಿಟಿ IIರಲ್ಲಿ ಸಾಮಾನ್ಯ ಜ್ಞಾನ, ಗಣಿತ, ರೀಸನಿಂಗ್‌, ಮೂಲ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳ ಜತೆಗೆ ನಿಮ್ಮ ಟೆಕ್ನಿಕಲ್‌ ಜ್ಞಾನವನ್ನೂ ಪರೀಕ್ಷಿಸಲಾಗುತ್ತದೆ. ಈ ಎರಡೂ ಹಂತಗಳನ್ನು ದಾಟಿದವರ ಪ್ರಮಾಣ ಪತ್ರವನ್ನು ವಿವರವಾಗಿ ಪರಿಶೀಲಿಸಲಾಗುತ್ತದೆ. ಮುಂದಿನ ಹಂತದಲ್ಲಿ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ ಟೆಕ್ನೀಷಿಯನ್‌ ಗ್ರೇಡ್‌ 1 ಸಿಗ್ನಲ್‌-29,200 ರೂ. ಮತ್ತು ಟೆಕ್ನೀಷಿಯನ್‌ ಗ್ರೇಡ್‌ 3 ಸಿಗ್ನಲ್‌-19,900 ರೂ. ಮಾಸಿಕ ವೇತನ ದೊರೆಯಲಿದೆ.

Chaitra Kulal

Recent Posts

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

8 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

15 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

32 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

59 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago