News Karnataka Kannada
Friday, May 03 2024
ಬೆಂಗಳೂರು

ಸರಕಾರಿ ಅಧಿಕಾರಿಗಳ ವರ್ಗಾವಣೆ ದಂಧೆ: ದರಪಟ್ಟಿ ಪ್ರದರ್ಶಿಸಿದ ಎಚ್‌.ಡಿ. ಕುಮಾರಸ್ವಾಮಿ

ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿದೆ. ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ. ಇದು ನ್ಯಾಯವೇ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ  ವಿರುದ್ಧ ಕಿಡಿಕಾರಿದ್ದಾರೆ.
Photo Credit :

ಬೆಂಗಳೂರು: ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪ ಮಾಡಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ತಮ್ಮ ಆರೋಪದ ಬಗ್ಗೆ ದಾಖಲೆಗಳನ್ನು ಸರಕಾರಕ್ಕೆ ಒಪ್ಪಿಸುವುದಾಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಅಧಿಕಾರಿಗಳ ವರ್ಗಾವಣೆಯಲ್ಲಿ ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ವಿವಿಧ ಯೋಜನೆಗಳಿಗೆ ನಿಗದಿಪಡಿಸಲಾಗಿದೆ ಎನ್ನಲಾದ ‘ಕಮಿಷನ್ ದರಪಟ್ಟಿ’ಯನ್ನು ಬುಧವಾರ ವಿಧಾನಸಭೆಗೆ ಸಲ್ಲಿಸಿದರು.

ಎಲ್ಲ ಇಲಾಖೆಗಳಲ್ಲಿ ವರ್ಗಾವಣೆಗೆ ದರ ನಿಗದಿ ಆಗಿದೆ. ಈ ಬಗ್ಗೆ ಹಾದಿ ಬೀದಿಯಲ್ಲಿ ಜನರು ಆಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಯಾವುದೋ ಒಂದು ಇಲಾಖೆಯಲ್ಲಿ ನಿಗದಿ ಮಾಡಿರುವ ವರ್ಗಾವಣೆಯ ದರಪಟ್ಟಿ ನನ್ನ ಕೈಯ್ಯಲ್ಲಿ ಇದೆ. ಅದನ್ನು ಯಾರೋ ನನಗೆ ತಂದು ಸಂಪೂರ್ಣ ವಿವರ ನೀಡಿದ್ದಾರೆ ಎಂದರು.

ಹಿಂದಿನ ಬಿಜೆಪಿ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ನೀವು (ಕಾಂಗ್ರೆಸ್), ನೇಮಕಾತಿ, ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿಗೆ ದರ ನಿಗದಿ ಮಾಡಿದ್ದ ಬಗ್ಗೆ ಜಾಹೀರಾತನ್ನೂ ನೀಡಿದ್ದೀರಿ, ದರಪಟ್ಟಿಯನ್ನೂ ಪ್ರಕಟಿಸಲಾಗಿತ್ತು, ಈಗ ಒಂದು ಇಲಾಖೆಯ ದರಪಟ್ಟಿ ನನ್ನ ಬಳಿ ಇದೆ, ಅಧಿಕಾರಿಗಳೇ ನನಗೆ ಕೊಟ್ಟಿದ್ದಾರೆ ಎಂದು ತಮ್ಮ ಬಳಿ ಇದ್ದ ಪಟ್ಟಿಯನ್ನು ವಿಧಾನಸಭೆಯಲ್ಲಿ ಪ್ರದರ್ಶಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು