ಬೆಂಗಳೂರು: ವಿದ್ಯುತ್ ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿರೋ ಘಟನೆ ರಾಮಸಂದ್ರದಲ್ಲಿ ನಡೆದಿದೆ. ರಾಮಸಂದ್ರದ ಮನೆಯೊಂದರ ಸಮೀಪದಲ್ಲಿ ಬ್ಲ್ಯಾಸ್ಟ್ ಆಗಿದೆ.
ಇನ್ನೂ, ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ಆದ ಪರಿಣಾಮ ಧಗಧಗನೆ ಬೆಂಕಿ ಹೊತ್ತಿಕೊಂಡಿದೆ. ಬಳಿಕ ದಟ್ಟ ಹೊಗೆ ಆವರಿಸಿಕೊಂಡಿದೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಅಕ್ಕ ಪಕ್ಕದ ನಿವಾಸಿಗಳು ಏಕಾಏಕಿ ಮನೆಯಿಂದ ಓಡಿ ಹೊರಗಡೆ ಬಂದಿದ್ದಾರೆ. ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.