ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲ ನಟರಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ಕುರಿತು ತುಮಕೂರು ಮೂಲದ ಬಿಜೆಪಿ ಕಾರ್ಯಕರ್ತೆ ಶಕುಂತಲ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದರು.
ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಇದೀಗ ಇಂದು ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ..@siddaramaiah ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? pic.twitter.com/jP0QTKvL5R— ಶಕುಂತಲ ನಟರಾಜ್ (ಮೋದಿ ಪರಿವಾರ) (@ShakunthalaHS) July 25, 2023