News Karnataka Kannada
Friday, April 19 2024
Cricket
ತುಮಕೂರು

ತುಮಕೂರಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

Accident.
Photo Credit :

ತುಮಕೂರು:  ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.

ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.

ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಹೆಸರು ವಿಳಾಸ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂದ ಕೋರಾ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು