News Karnataka Kannada
Thursday, April 18 2024
Cricket
ತುಮಕೂರು

ಮಾಜಿ ಸಚಿವ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Tb Ramachandra.
Photo Credit :

ಶಿರಾ:  ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಟಿ.ಬಿ.ಜಯಚಂದ್ರ ಪ್ರಯಾಣ ಮಾಡುತ್ತಿದ್ದ ಕಾರು  ರಾಷ್ಟ್ರೀಯ ಹೆದ್ದಾರಿ-48ರ ಸೀಬಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ  ಅಪಘಾತವಾಗಿದ್ದು, ಗಾಯಗೊಂಡಿದ್ದಾರೆ.

ಶಿರಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಮಯದಲ್ಲಿ ಸೀಬಿ ಬಳಿ ಕಾರಿನ ಹಿಂದಿನ ಚಕ್ರ ಸಿಡಿದು ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

ಈ ಸಮಯದಲ್ಲಿ ಜಯಚಂದ್ರ ಅವರು ಸೀಟ್ ಬೆಲ್ಟ್ ಹಾಕಿಕೊಂಡಿದ್ದರಿಂದ ಏರ್‌ ಬ್ಯಾಗ್‌ ತೆರೆದುಕೊಂಡ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಜಯಚಂದ್ರ ಅವರ ಎಡ ಭುಜಕ್ಕೆ ಪೆಟ್ಟಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಯಿತು. ಅವರ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದ ಚಾಲಕ ದಿಲೀಫ್ ಹಾಗೂ ಗನ್ ಮ್ಯಾನ್ ಕೃಪೇಶ್ ಆರೋಗ್ಯವಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು