News Karnataka Kannada
Thursday, April 25 2024
Cricket
ತುಮಕೂರು

ಲೋಕ ಕಲ್ಯಾಣಕ್ಕಾಗಿ ಶ್ರೀ ಹನುಮ ಎತ್ತಿದ ಅವತಾರ ಪಂಚಮುಖಿ: ಸಿಎಂ ಬೊಮ್ಮಾಯಿ

Bommayi
Photo Credit : Twitter

ತುಮಕೂರು: ಲೋಕ ಕಲ್ಯಾಣಕ್ಕಾಗಿ ಶ್ರೀ ಹನುಮ ಎತ್ತಿದ ಅವತಾರ ಪಂಚಮುಖಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕುಣಿಗಲ್ ತಾಲ್ಲೂಕಿನ ಬಿದನಗೆರೆಯಲ್ಲಿ ನಿರ್ಮಿಸಲಾಗಿರುವ ವಿಶ್ವದ ಎತ್ತರದ 161 ಅಡಿ ಎತ್ತರದ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಶ್ರೀ ಹನುಮನ ಆರ್ಶೀವಾದದಿಂದ ರಾಜ್ಯದ ಪಾಲಿಗೆ ಉತ್ತಮ ದಿನಗಳು ಬರಲಿವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ನಂಜಾವಧೂತಸ್ವಾಮೀಜಿ, ವಚನಾನಂದ ಸ್ವಾಮೀಜಿ, ಸಚಿವರಾದ ಸಿ.ಎನ್.ಅಶ್ವತ್ಥನಾರಾಯಣ್, ಸಂಸದ ಮುನಿಸ್ವಾಮಿ, ಶಾಸಕ ರಾಜುಗೌಡ, ಡಾ.ರಂಗನಾಥ್, ಮಾಜಿ ಶಾಸಕ ಸುರೇಶ್ ಗೌಡ, ಡಿ.ನಾಗರಾಜಯ್ಯ, ಮಾಜಿ ಸಂಸದ ಮುದ್ದಹನುಮೇಗೌಡ, ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಸೇರಿದಂತೆ ಇತರರಿದ್ದರು.

ಬಿದನಗೆರೆಯಲ್ಲಿ ನಿರ್ಮಿಸಲಾಗಿರುವ 161ಅಡಿ ಪಂಚಮುಖಿ ಆಂಜನೇಯ ಸ್ವಾಮಿ ವಿಗ್ರಹ ಲೋಕಾರ್ಪಣೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರಿಗೆ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಆರತಿ ಎತ್ತಿ ಸ್ವಾಗತಿಸಿದರು, ಈ ವೇಳೆ ಆರತಿ ಎತ್ತಿದ ತಾರಾಗೆ ಸಂಪ್ರದಾಯದಂತೆ ಸಿಎಂ ಜೇಬಿನಿಂದ ಹಣ ತೆಗೆದು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು