Categories: ತುಮಕೂರು

ಅಣ್ಣ-ತಂಗಿ ಅನೈತಿಕ ಸಂಬಂಧ; ಅಡ್ಡಿಯಾದ ತಾಯಿಯನ್ನೇ ಕೊಲೆ!

ತುಮಕೂರು:  ಅನೈತಿಕ ಸಂಬಂಧಕ್ಕಾಗಿ ಅಣ್ಣ ಮತ್ತು ತಂಗಿ ಜೊತೆಯಾಗಿ ತಾಯಿಯನ್ನೇ ಕೊಲೆಗೈದಿರುವ ಅಂಶ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ತಮ್ಮಿಬ್ಬರ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಸಾವಿತ್ರಮ್ಮನನ್ನು ಕತ್ತು ಹಿಸುಕಿ ಕೊಲೆಗೈದಿದ್ದರೆನ್ನಲಾಗಿದೆ.

ಶೈಲಜಾ ಮತ್ತು ಪುನೀತ್ ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳು. ಸಂಬಂಧದಲ್ಲಿ ಪುನೀತ್ ಶೈಲಜಾಗೆ ಅಣ್ಣ. ಆದರೆ ಇವರಿಬ್ಬರೂ ಅನೈತಿಕ ಸಂಬಂಧ ಹೊಂದಿರುವುದನ್ನು ತಿಳಿದ ಶೈಲಜಾ ತಾಯಿ ಸಾವಿತ್ರಮ್ಮ ಇಬ್ಬರಿಗೂ ಬುದ್ಧಿ ಹೇಳಿದ್ದರು.

ಜನವರಿ 30ರಂದು ಕೊರಟಗೆರೆ ಪಟ್ಟಣದ ಸಜ್ಜನರಾವ್ ಬೀದಿಯ ಸಾವಿತ್ರಮ್ಮ (45ವರ್ಷ) ಎಂಬವರು ಮನೆಯ ಮುಂಭಾಗದ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ವರದಿಯಾಗಿತ್ತು.

ಬುದ್ದಿವಾದದ ನಂತರ ಇಬ್ಬರೂ ದೂರವಾಗಿದ್ದರೂ ಕೂಡಾ, ಮತ್ತೆ ತಮ್ಮ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆನ್ನಲಾಗಿದೆ.

ಈ ಘಟನೆ ನಡೆದ ನಂತರ ಸಾವಿತ್ರಮ್ಮ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ಶೈಲಜಾ ಮತ್ತು ಪುನೀತ್ ಕಥೆ ಹೆಣೆದಿದ್ದರು. ಘಟನೆ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಶೈಲಜಾ ಮತ್ತು ಪುನೀತ್ ನನ್ನು ಕೊರಟಗೆರೆ ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದಾಗ ಕೊಲೆ ಗುಟ್ಟು ಹೊರಬಿದ್ದಿದ್ದು, ಇದೀಗ ಇಬ್ಬರನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.

Swathi MG

Recent Posts

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗೆದ್ದು ಬೀಗಿದ ಆರ್​​​ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್​ ಪಂದ್ಯದಲ್ಲಿ ವಿರಾಟ್…

5 mins ago

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

8 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

8 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

8 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago