Categories: ತುಮಕೂರು

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯ ಬಂಧನ

ತುಮಕೂರು : ಸ್ನೇಹಿತೆಯ ಮನೆಗೆ ನೋಟ್ಸ್ ನೀಡಲು ಬಂದಿದ್ದ ಅಪ್ರಾಪ್ತೆಯ ಮೇಲೆಯೇ ಅತ್ಯಾಚಾರ ನಡೆಸಿ, ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಸದ್ಯ ಪೊಲೀಸರು ಕಾರಣನಾದ ಪಾಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.ಆರೋಪಿ ಅಸ್ಲಾಂನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯು ತನ್ನ ಗೆಳತಿಗೆ ನೋಟ್ಸ್ ನೀಡಲು ಅವರ ಮನೆಗೆ ಹೋಗಿದ್ದಳು. ಈ ಸಂದರ್ಭದಲ್ಲಿ ಪಾಪಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.

ಈ ಘಟನೆ ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಡಿಯುವ ನೀರಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ನೀಡಿ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಆ ನಂತರ ವಿಷಯ ಯಾರಿಗೂ ಹೇಳದಂತೆ ಕೊಲೆ ಬೆದರಿಕೆ ಹಾಕಿದ್ದಾನೆ. ಆದರೆ, ಬಾಲಕಿಯ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿದೆ. ಹೀಗಾಗಿ ಆಸ್ಪತ್ರೆಗೆ ಹೋದಾಗ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ. ಆಗ ಅಪ್ರಾಪ್ತೆ ವಿಷಯವನ್ನು ತಿಳಿಸಿದ್ದಾಳೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

Swathi MG

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

3 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

3 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

3 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

4 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

4 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

4 hours ago