ತುಮಕೂರು : ಆದಿಚುಂಚನಗಿರಿಯಲ್ಲಿ ಮಹಾಲಯ ಸಂಭ್ರಮ, ಡಾ.ನಿರ್ಮಲಾನಂದನಾಥ ಶ್ರೀಗಳಿಂದ ವಿಶೇಷ ಪೂಜೆ. ಆಸ್ತಿಕರ ಬಹು ನಂಬುಗೆಯ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಪರಮಪೂಜ್ಯ, ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಈ ಸಂದರ್ಭ ಎಲ್ಲಾ ಕ್ಷೇತ್ರಾಧಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಭಕ್ತರು ಪಾಲ್ಗೊಂಡು ಪುಣ್ಯ ಕ್ಷಣಗಳನ್ನು ಕಣ್ತುಂಬಿಕೊಂಡರು.