News Karnataka Kannada
Sunday, April 28 2024
ತುಮಕೂರು

ಕಸಾಯಿಖಾನೆಗೆ ಸಾಗಿಸುತ್ತಿದ್ದ 6 ಹಸುಗಳ ರಕ್ಷಣೆ ಮಾಡಿದ ಬಜರಂಗದಳ

Mangaluru: In the last five years, cow lovers have been relieved
Photo Credit :

ತುಮಕೂರು : ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ವಿಧಿಸಿರುವ ಕರ್ಫ್ಯೂ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಗೌರಿಬೀದನೂರಿನ ಕಸಾಯಿಖಾನೆಗೆ ಸಾಗಿಸುತ್ತಿದ್ದ ಆರು ಗೋವುಗಳನ್ನು ತುಮಕೂರು ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ನೇತೃತ್ವದ ತಂಡ ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧುಗಿರಿ ತಾ ಬಡವನಹಳ್ಳಿ  ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆಸಿದೆ. ಕಾಟಗೊಂಡನ ಹಳ್ಳಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಮಾಂಸಕ್ಕಾಗಿ ಸಾಗಿಸಲು ಸಂಗ್ರಹಿಸಲಾಗುತ್ತು. ಆ ವೇಳೆ ಶೆಡ್ ಮೇಲೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ, ಸತತ 18 ಗಂಟೆಗಳ ಕಾರ್ಯಾಚರಣೆ ನಡೆಸಿ 6 ಗೋವುಗಳನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಬಜರಂಗದಳದ ಕಾರ್ಯಕರ್ತರು ಬಡವನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲು ಮಾಡಿದ್ದಾರೆ.

ಈ ಕರ್ಮವನ್ನು ತಡೆಯಲು ಹೋದ ಬಜರಂಗದಳದ ಕಾರ್ಯಕರ್ತ ರವಿ ಕುಮಾರ್ ಮೇಲೆ 7-8 ಜನ ಗೋ ಕಳ್ಳರು ಹಲ್ಲೆ ನಡೆಸಿದ್ದು, ಅವರನ್ನು ಮಧುಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋವುಗಳನ್ನು ಸಾಗಿಸಲು ಬಳಸಲಾಗಿದ್ದ KA-64-4678 ವಾಹನವನ್ನು   ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಗೋವುಗಳನ್ನು ಆಂಧ್ರಪ್ರದೇಶದ ಗುಡಿಬಂಡೆ ಸಂತೆಯಿಂದ ಗೌರಿಬೀದನೂರಿನ  ಅಸಲೀಪುರದ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದು, ಕೋಟಗೊಂಡನಹಳ್ಳಿಯ  ಶಿರಡಿಸಾಯಿಬಾಬ ಆಶ್ರಮದ ಬಳಿ ಬಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು