ತುಮಕೂರು : ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾಶಪುರ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರೈತ ಗೋಪಾಲ ನಾಯ್ಕ್ ಮತ್ತು ಭಿಕ್ಷುಕರೊಬ್ಬರಿಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬಸ್ ನಲ್ಲಿದ್ದ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬಳಿಕ ಕೆಎಸ್ ಆರ್ ಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.