ತುಮಕೂರು: ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೂವರು ದುರಂತ ಅಂತ್ಯ ಕಂಡಿದ್ದಾರೆ. ಕಾರಿನಲ್ಲಿದ್ದ ಒಂದು ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಇನ್ನೂ ಮೂವರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರ ಹೆಸರು ವಿಳಾಸ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂದ ಕೋರಾ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…
ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…
ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…