ತುಮಕೂರು : ತಾಯಿ ಎದುರೇ 17 ವರ್ಷದ ಮಗಳನ್ನು ಅಪಹರಣ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಗಿಲು ಮುರಿದು ಮನೆಗೆ ನುಗ್ಗಿ ಬಾಲಕಿಯನ್ನು ಕಿಡ್ನ್ಯಾಪ್ ಮಾಡಿದ್ದಾರೆ. ಪೋಷಕರು ಮಲಗಿದ್ದಾಗ ಬಾಗಿಲು ಬಡಿದು ಒಳಗೆ ನುಗ್ಗಿದ್ದಾರೆ. ನಂತರ ಬಾಲಕಿಯನ್ನ ಬೈಕ್ನಲ್ಲಿ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.