ತುಮಕೂರು : ಒಮಿಕ್ರಾನ್ ಆತಂಕದ ಹೊತ್ತಲ್ಲೇ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು, ನರ್ಸಿಂಗ್ ಕಾಲೇಜುಗಳಲ್ಲಿ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಬಂದ ಎಲ್ಲಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಮೂರೂ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆಯಾಗಿದೆ. ಇದರೊಂದಿಗೆ ತುಮಕೂರು ಜಿಲ್ಲೆಯಲ್ಲಿ ಒಟ್ಟು 23 ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿವೆ.
ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅರುಣ ನರ್ಸಿಂಗ್ ಕಾಲೇಜಿನಲ್ಲಿ ಮೂವರು, ವರದರಾಜ ಕಾಲೇಜಿನಲ್ಲಿ 12 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.