News Karnataka Kannada
Monday, May 06 2024
ತುಮಕೂರು

ತುಮಕೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ

New Project (7)
Photo Credit :

ತುಮಕೂರು: ತುಮಕೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ತಮ್ಮ ಒಂದೂವರೆ ವರ್ಷದ ಅವದಿಯಲ್ಲಿ ಜನತೆ ತಮಗೆ ತೋರಿಸಿದ ಪ್ರೀತಿ, ಬೆಂಬಲಕ್ಕೆ ತಾವು ಅಭಾರಿಯಾಗಿರುವುದಾಗಿ ತಿಳಿಸಿದ್ದಾರೆ.

ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭಾ ಚುನಾವಣೆ ಜತೆಗೆ, ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯೂ ಒಂದಾಗಿತ್ತು. ಶಿರಾ ತಾಲ್ಲೂಕಿನ ಜನರು ನನ್ನ ಬಗ್ಗೆ ಪ್ರೀತಿ ತೋರಿ ಪಕ್ಷದ ಪರ ನಿಂತರು. ಜಿಲ್ಲೆಯ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳ ಜನರು, ವಿಶೇಷವಾಗಿ ನನ್ನ ತುಮಕೂರು ಗ್ರಾಮಾಂತರ ಕ್ಷೇತ್ರದ ನನ್ನ ಪ್ರೀತಿಯ ಜನರು, ಅಭಿಮಾನಿಗಳು ನನ್ನ ಪರವಾಗಿ ಶಿರಾ ಜನರಲ್ಲಿ ಪ್ರೀತಿ, ಅಭಿಮಾನ ಉಕ್ಕುವಂತೆ ಮಾಡಿದರು. ಪರಿಣಾಮವಾಗಿ ನೆಲೆಯೇ ಇಲ್ಲದ ಶಿರಾದಲ್ಲಿ ನನ್ನ ನೇತೃತ್ವದಲ್ಲಿ ಪಕ್ಷ ಗೆಲ್ಲುವಂತಾಯಿತು. ಇದಕ್ಕೆಲ್ಲ ಅಲ್ಲಿನ ಜನರು ಹಾಗೂ ನನ್ನ ಗ್ರಾಮಾಂತರ ಕ್ಷೇತ್ರದ ಜನರ ಆರ್ಶೀವಾದ, ಕೊಟ್ಟ ಸಹಕಾರ, ಧೈರ್ಯವೇ ಕಾರಣ, ಈ ಸಂದರ್ಭದಲ್ಲಿ ನನ್ನ ಈ ಎಲ್ಲಾ ಜನರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

ನಾನು ಎರಡು ಸಲ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಸಲ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷನಾಗಿ. ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು, ಹೆಸರುವಾಸಿಯಾಗಲು ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣವಾಗಿತ್ತೇ ಹೊರತು ಬೇರೇನು ಅಲ್ಲ. ಜಿಲ್ಲಾ ಘಟಕದ ಅಧ್ಯಕ್ಷನಾದ ಮೇಲೆ ಪಕ್ಷದ ಕೆಲಸಗಳ ಕಾರಣ ನನ್ನ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ ಎಂಬ ಕೊರಗು ಸದಾ ನನ್ನನ್ನು ಕಾಡುತ್ತಿತ್ತು, ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ.

ಕೋವಿಡ್ ನಿಂದ ಆರ್ಥಿಕ ಹಿಂಜರಿತ, ನೀರಾವರಿ ಸಮಸ್ಯೆಯಿಂದ ಜನರು ಅನುಭವಿಸುತ್ತಿರುವ ಬವಣೆ, ಶಿಕ್ಷಣದ ಗುಣಮಟ್ಟದ ಕುಸಿತದಿಂದ ಕ್ಷೇತ್ರದ ಮಕ್ಕಳು ಅನುಭವಿಸುತ್ತಿರುವ ಯಾತನೆಯ ಹಿನ್ನೆಲೆಯಲ್ಲಿ ಅವರೊಂದಿಗೆ ಸದಾ ಸಮಯ ಇರಬೇಕೆಂದು ಮನಸ್ಸು ಹೇಳುತ್ತಿತ್ತು. ನನ್ನ ಕ್ಷೇತ್ರದ ಜನರೇ ನನಗೆ ಎಲ್ಲವೂ ಆಗಿರುವುದರಿಂದ ಅವರೊಂದಿಗೆ ಇರಲು ರಾಜೀನಾಮೆ ನಿರ್ಧಾರ ಮಾಡಿದೆ ಎಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು