ತುಮಕೂರು: ವಿದ್ಯಾನಿಧಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ ಭುವನ್ ನಗರದ ಬಟವಾಡಿ ಬಳಿಯ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಭುವನ್, ದ್ವಿತೀಯ ಪಿಯುಸಿ ಆಂತರಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆ ಬೆಳಕಿಗೆ ಬಂದ ತಕ್ಷಣ ಹಾಸ್ಟೆಲ್ ವಾರ್ಡನ್ ಮತ್ತು ವಿದ್ಯಾರ್ಥಿಗಳು ಭುವನ್ರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದರು. ಚಿಕಿತ್ಸೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.