ತುಮಕೂರು

ನೆಲಮಂಗಲ ಬಳಿ ಸರಣಿ ಅಪಘಾತ,ಒಂಬತ್ತು ವಾಹನಗಳು ಜಖಂ

ಬೆಂಗಳೂರು: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿಯಲ್ಲಿ ಅಪಘಾತ ಸಂಭವಿಸಿ ಸುಮಾರು ಒಂಬತ್ತು ವಾಹನಗಳು ಜಖಂಗೊಂಡು, ಒರ್ವನಿಗೆ ಗಾಯವಾಗಿರುವ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ.

ಅನಿವಾರ್ಯವಾಗಿ ಕೆಲ ಕಾಲ ಹೆದ್ಧಾರಿಯ ಬಲಭಾಗದ ರಸ್ತೆಯಲ್ಲೇ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತುಮುಂಜಾನೆ ಅಪಘಾತ ಸಂಭವಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಬೆಳಗ್ಗೆ 11 ಗಂಟೆಯವರೆಗೂ ಹರಸಾಹಸ ಪಟ್ಟರು.ದಟ್ಟ ಮಂಜಿನಿಂದಾಗಿ ಎದುರಿನ ವಾಹನ ಸ್ಪಷ್ಟವಾಗಿ ಕಂಡಿರಲಿಲ್ಲ, ಹೀಗಾಗಿ ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್‍ಆರ್ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ.

ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್‍ಗೆ ಡಿಕ್ಕಿ ಹೊಡೆದಿದೆ.ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ ಲಾರಿ ಸೇರಿದಂತೆ ಒಂಬತ್ತು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ.ಅಪಘಾತದ ರಬಸಕ್ಕೆ ಲಾರಿ ಹಾಗೂ ಇತರ ವಾಹನಗಳು ರಸ್ತೆ ವಿಭಜಕದ ಮೇಲೆರಿ, ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಸಂಪೂರ್ಣ ಅಡ್ಡಲಾಗಿ ನಿಂತಿವೆ. ಇದರಿಂದ ಹಿಂದಿನಿಂದ ಬಂದ ವಾಹನಗಳು ಚಲಿಸಲಾಗದೆ ಸಂಚಾರ ದಟ್ಟಣೆ ಉಂಟಾಯಿತು.

 ತರಕಾರಿ ಲಾರಿ ಅಪಘಾತದಿಂದ ರಸ್ತೆಯಲ್ಲೆಲ್ಲಾ ತರಕಾರಿ ಚೆಲ್ಲಾಪಿಲ್ಲಿಯಾಗಿತ್ತು. ಕ್ಯಾಂಟರ್ ಡಿಕ್ಕಿಯಿಂದ ವಾಹನ ಚಾಲಕನ ಕಾಲು ಮುರಿದಿದೆ. ಕಾರು ಡಿಕ್ಕಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Swathi MG

Recent Posts

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

4 mins ago

ಮೀನಾ ಹತ್ಯೆ ಪ್ರಕರಣ: ವಿಶೇಷ ನ್ಯಾಯಾಲಯ ತೆರೆಯಲು ಕ್ರಮ

ಬಾಲಕಿಯನ್ನು ಹತ್ಯೆ ಮಾಡಿರುವ ಕೃತ್ಯ ಸಹಿಸಲಾಗುವುದಿಲ್ಲ. ಬಾಲಕಿಯ ಕುಟುಂಬಕ್ಕೆ ನ್ಯಾಯ  ಒದಗಿಸುವ ನಿಟ್ಟಿನಲ್ಲಿ  ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.…

16 mins ago

ಕೇಸೋರಾಮ್ ಇಂಡಸ್ಟ್ರೀಸ್ ಮುಖ್ಯಸ್ಥೆ ಮಂಜುಶ್ರೀ ಖೇತಾನ್ ವಿಧಿವಶ

ಬಿಕೆ ಬಿರ್ಲಾ ಒಡೆತನದ ಕೇಸೋರಾಮ್ ಇಂಡಸ್ಟ್ರೀಸ್ ಸಂಸ್ಥೆಯ ಛೇರ್ಮನ್ ಆಗಿದ್ದ ಮಂಜುಶ್ರೀ ಖೇತಾನ್ ನಿಧನರಾಗಿದ್ದಾರೆ.

18 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಂಗಳೂರಲ್ಲಿ ನಡೆದಿದೆ.

26 mins ago

ಎಸ್‌ಎಸ್‌ಎಲ್‌ಸಿ ಗ್ರೇಸ್ ಮಾರ್ಕ್ಸ್‌ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಈ ಬಾರಿಯ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್ ಕೊಟ್ಟು ವಿದ್ಯಾರ್ಥಿಗಳನ್ನ ಪಾಸ್ ಮಾಡಿದ್ದು…

29 mins ago

ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟ: ಮನೆಯ ವಸ್ತುಗಳು ಬೆಂಕಿಗಾಹುತಿ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡ ಘಟನೆ ನಡೆದಿದೆ.

37 mins ago