ತುಮಕೂರು: ಭಾನುವಾರ ಜಿಲ್ಲಾ ಆಸ್ಪತ್ರೆಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ, ಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಶನಿವಾರ ನಡೆದ ಖಾಸಗಿ ಬಸ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು.
ಸರ್ಕಾರ ನಿಮ್ಮೊಂದಿಗೆ ಇದೆ.ಯಾವುದೇ ರೀತಿಯ ಭಯಪಡಬೇಡಿ. ಎಲ್ಲ ರೀತಿಯ ಚಿಕಿತ್ಸೆ ನೀಡಲಾಗುವುದು ಎಂದು ಗಾಯಾಳುಗಳಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದರು.
ಶಾಸಕ ಜಿ.ಬಿ. ಜ್ಯೋತಿಗಣೇಶ್, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ. ಶಹಪೂರವಾಡ್, ಡಿಎಚ್ಒ ಡಾ.ನಾಗೇಂದ್ರಪ್ಪ ಉಪಸ್ಥಿತರಿದ್ದರು.