ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ತಿರುವಿನ ಬಳಿ ಭೀಕರ ರಸ್ತೆ ಅಪಘಾತವಾಗಿದ್ದು, ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.