Categories: ತುಮಕೂರು

ಭ್ರಷ್ಟಾಚಾರ ಬಿತ್ತಿದ್ದು, ಬೆಳಸಿದ್ದು ಕಾಂಗ್ರೆಸ್ ಪಕ್ಷ; ಸಿ.ಟಿ.ರವಿ

ತುಮಕೂರು: ಭ್ರಷ್ಟಾಚಾರ ಬಿತ್ತಿದ್ದು, ಬೆಳಸಿದ್ದು ಕಾಂಗ್ರೆಸ್ ಪಕ್ಷ. ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಸೇರಿ ಹೋಗಿದೆ. ಅದನ್ನು ನಿಯಂತ್ರಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ಪರೀಕ್ಷೆ ಅಕ್ರಮದ ವಿರುದ್ದ ಬಿಜೆಪಿ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ.

ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ಪರೀಕ್ಷೆ ಅಕ್ರಮದ ವಿರುದ್ದ ಬಿಜೆಪಿ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಕ್ರಮ ತೆಗೆದುಕೊಂಡರೂ ಅಪರಾಧ ಹೇಗಾಗುತ್ತದೆ. ಮುಚ್ಚಿ ಹಾಕಿದರೆ ಅಪರಾಧ ಆಗುತ್ತಿತ್ತು ಎಂದರು.

ಪ್ರಕರಣವನ್ನು ಮುಚ್ಚಿ ಹಾಕುವ ಕೆಲಸ ಮಾಡಿಲ್ಲ. ಆದರೆ ಮುಚ್ಚಿಹಾಕುವ ಕೆಲಸವನ್ನು ಬಹಳ ಹಿಂದಿನಿಂದ ವ್ಯವಸ್ಥಿತವಾಗಿ ಕಾಂಗ್ರೆಸ್ ಮಾಡಿಕೊಂಡು ಬಂದಿದೆ. ಸ್ವತಃ ಅರ್ಕಾವತಿ ಹಗರಣದಲ್ಲಿ ಸಿದ್ದರಾಮಯ್ಯ ಮಾಡಿದ್ದೇನು? ರಿಡ್ಯೂ ಎನ್ನುವ ಹೊಸ ಪರಿಭಾಷೆ ಹುಟ್ಟು ಹಾಕಿದರು. ಕದ್ದಿದ್ದ ವಾಚನ್ನು ಕಟ್ಟಿಕೊಂಡಿದ್ದವರು ಯಾರು? ಅದನ್ನು ಹೇಗೆ ಮುಚ್ಚಿ ಹಾಕಿದರು. ಬೇರೆ ಯಾರೋ ವಿಪಕ್ಷ ನಾಯಕರು ಕದ್ದು ವಾಚು ಕಟ್ಟಿಕೊಂಡಿದ್ದರೆ ಇವರು ಬಿಡುತ್ತಿದ್ದರಾ ಎಂದು ಪ್ರಶ್ನಿಸಿದರು.

40% ಕಮಿಷನ್ ಎನ್ನುವುದು ಸುಳ್ಳು. ಅಷ್ಟೊಂದು ಹಣ ಕೊಟ್ಟು ಕೆಲಸ ಮಾಡಲು ಸಾಧ್ಯವಿದೆಯೇ? ಕೆಲಸ ಮಾಡುವುದೇ ಕಷ್ಟವೆಂಬ ಸ್ಥಿತಿಯಲ್ಲಿ 40% ಕೊಟ್ಟು ಕೆಲಸ ಮಾಡಲಾಗುತ್ತದೆಯೇ? ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬ ಉದ್ದೇಶದಿಂದ ವ್ಯವಸ್ಥಿತವಾಗಿ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು.

ಹುಬ್ಬಳಿ ಪ್ರಕರಣ ಮಾತ್ರನಲ್ಲ, ಪಾದರಾಯನಪುರ, ಕೆಜಿಹಳ್ಳಿ, ಡಿಜೆಹಳ್ಳಿ ಹೀಗೆ ರಾಜ್ಯದ ಉದ್ದಗಲಕ್ಕೂ ನಡೆದ ಗಲಭೆಗಳ ಹಿಂದೆ ಕಾಂಗ್ರೆಸ್ ಪಾತ್ರ ಇರುವುದು ಸ್ಪಷ್ಟವಾಗಿ ಕಾಣುತ್ತದೆ. ಹಿಜಾಬ್ ಗಲಾಟೆಯಿಂದ ಮೊದಲುಗೊಂಡು ಎಲ್ಲಾ ಗಲಭೆಯಲ್ಲೂ ಕಾಂಗ್ರೆಸ್ ಪಾತ್ರವಿದೆ ಎಂದು ಸಿ.ಟಿ ರವಿ ಹೇಳಿದರು.

ಏಕರೂಪ ನಾಗರೀಕ ಸಂಹಿತೆ ಬಗ್ಗೆ ಅಂಬೇಡ್ಕರ್ ರೇ ಪ್ರತಿಪಾದನೆ ಮಾಡಿದ್ದಾರೆ. ಈ ಕುರಿತು ಸಾರ್ವಜನಿಕ ಚರ್ಚೆಯಾಗಲಿ. ಸಂವಿಧಾನ ರಚನೆಯಾದಾಗಲೇ ಏಕರೂಪ ನಾಗರಿಕ ಸಂಹಿತೆ ಕುರಿತು ಚರ್ಚೆ ನಡೆದಿದೆ. ಅಂಬೇಡ್ಕರ್ ಈ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ್ದರು. ಸಾರ್ವಜನಿಕ ಚರ್ಚೆಯಲ್ಲಿ ಅಭಿಪ್ರಾಯ ರೂಪಿಸಿ, ಅಭಿಪ್ರಾಯ ಏಕರೂಪ ನಾಗರಿಕ ಸಂಹಿತೆ ಪರವಾಗಿದ್ದರೆ ಜಾರಿ ತರಬೇಕು ಎಂದರು.

Gayathri SG

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago