ತುಮಕೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ಮಾಯಸಂದ್ರ ಬಳಿಯ ಚಿಕ್ಕಪುರ ಗೇಟ್ ಬಳಿ ನಡೆದಿದೆ.
ಕುಟುಂಬ ಸಮೇತ ತುರುವೇಕೆರೆಯ ಬೇಟೆರಾಯ ಸ್ವಾಮಿ ದೇವಸ್ಥಾನಕ್ಕೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಿ.ಎಸ್.ರವಿ(54), ಪತ್ನಿ ಜ್ಯೋತಿ(48) ಮೃತ ದುರ್ದೈವಿಗಳು.
ಮೃತ ಬಿ.ಎಸ್.ರವಿ ದಂಪತಿ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿಯ ಮಗ ಹಾಗೂ ಮಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.