ತುಮಕೂರು: ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆಯಲ್ಲಿ 25ಸ್ಥಾನಗಳ ಪೈಕಿ ಹದಿನೈದು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಜನ ಸ್ವರಾಜ್ ಸಮಾವೇಶಕ್ಕೂ ಮುನ್ನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 45 ಸಾವಿರಕ್ಕೂ ಹೆಚ್ಚು ಗ್ರಾಪಂ ಸದಸ್ಯರು ಬಿಜೆಪಿ ಬೆಂಬಲಿತರಿದ್ದು, ಪರಿಷತ್ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವುದರೊಂದಿಗೆ ಪರಿಷತ್ ನಲ್ಲಿ ಬಿಜೆಪಿ ಬಹುಮತ ಸಾಧಿಸಲಿದೆ ಎಂದು ನುಡಿದರು.
ಈ ಬಾರಿ ಪಕ್ಷದ ಅಭ್ಯರ್ಥಿ ಗೆಲವು ಸಾಧಿಸುವುದು ನಿಶ್ಚಿತವೆನೆಸಿದ್ದು, ಇಂದು ಅಥವಾ ನಾಳೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು. ಈಗಾಗಲೇ ಚುನಾವಣೆಗೆ ಅಗತ್ಯ ತಯಾರಿ ನಡೆಸಲಾಗಿದೆ ಎಂದರು.