ತುಮಕೂರು: ಕೊರಟಗೆರೆಯ ಸರ್ಕಾರಿ ಹಾಸ್ಟೆಲ್ ನಲ್ಲಿನ ನರ್ಸ್ ಸೇರಿದಂತೆ 9 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.ನಿನ್ನೆ ಕೊರಟಗೆರೆಯಲ್ಲಿನ ವಸತಿ ಶಾಲೆಯ ಶಿಕ್ಷಕರು ಸೇರಿದಂತೆ 22 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.
ಇಂದು ಮತ್ತೆ ಹಾಸ್ಟೆಲ್ ನಲ್ಲಿ ಇತರರನ್ನು ಕೋವಿಡ್ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತು.ಈ ಹಿನ್ನಲೆಯಲ್ಲಿ ಹಾಸ್ಟೆಲ್ ಸೀಲ್ ಡೌನ್ ಮಾಡಿ, ಸ್ಯಾನಿಟೈಸರ್ ಮಾಡಲಾಗಿದೆ. ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇಂದಿನ ಪರೀಕ್ಷೆಯಲ್ಲಿ ಹಾಸ್ಟೆಲ್ ನ ನರ್ಸ್ ಸೇರಿದಂತೆ 9 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ.