News Karnataka Kannada
Wednesday, May 08 2024
ತುಮಕೂರು

ಸಿದ್ಧಗಂಗಾ ಮಠದ ಪರಂಪರೆ ಹಲವರಿಗೆ ಮಾದರಿಯಾಗಿದೆ; ಮುಖ್ಯಮಂತ್ರಿ ಬೊಮ್ಮಾಯಿ

Cm Bommai
Photo Credit :

ತುಮಕೂರು : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಬದುಕಿನ ಚಿತ್ರಣವನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಿದ್ಧಗಂಗಾ ಮಠಕ್ಕೆ ಗುರುವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ 115ನೇ ಜಯಂತಿ ಕಾರ್ಯಕ್ರಮದ ಪೂರ್ವಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಠದ ಪರಂಪರೆ ಹಲವರಿಗೆ ಮಾದರಿಯಾಗಿದೆ.

ಲಕ್ಷಾಂತರ ಮಕ್ಕಳು ಮಠದಿಂದ ವಿದ್ಯಾಭ್ಯಾಸ ಪಡೆದು ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ. ಸ್ವಾಮೀಜಿ ಜಯಂತಿಯನ್ನು ಉತ್ಸವದಂತೆ ಆಚರಿಸಲಾಗುವುದು’ ಎಂದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸುತ್ತಿರುವುದು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ಬಂದಿದೆ. ಕಾರ್ಯಕ್ರಮದ ಮೂಲಕ ಒಳ್ಳೆಯ ಸಂದೇಶ ಸಾರಬೇಕು. ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ಕೂಡ ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು. ಸಚಿವರಾದ ಆರಗ ಜ್ಞಾನೇಂದ್ರ, ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು