News Karnataka Kannada
Friday, May 03 2024
ತುಮಕೂರು

ಸೀಮೆ ಎಣ್ಣೆ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆ: ರಕ್ಷಿಸಲು ಹೋದ ಪೊಲೀಸರಿಗೆ ಗಾಯ

Dead
Photo Credit :

ತುಮಕೂರು: ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ಇಬ್ಬರು ಪೊಲೀಸರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಗ್ರಾಮದ ಗೋವಿಂದರಾಜು (40) ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮನೆಯವರನ್ನು ಹೆದರಿಸಿದ್ದಾರೆ.

ಈತನ ವರ್ತನೆಯಿಂದ ಹೆದರಿದ ಮನೆಯವರು ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವ ವೇಳೆಗೆ ಗೋವಿಂದರಾಜು ಕೊಠಡಿಯೊಳಗೆ ಸೇರಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಆತನನ್ನು ರಕ್ಷಿಸಲು ಪೊಲೀಸರು ಮುಂದಾದರು ಗೋವಿಂದರಾಜು ಜೀವಂತವಾಗಿ ಉಳಿಯಲಿಲ್ಲ.

ಘಟನೆಯಲ್ಲಿ ಗ್ರಾಮಾಂತರ ಠಾಣೆಯ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಹಾಯವಾಣಿಗೆ ಕರೆ ಮಾಡಿ:

ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ನಿಮ್ಮ ಜೀವನವು ಅಮೂಲ್ಯವಾದ್ದದ್ದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು