ತುಮಕೂರು

ಹೆಡಗೇವಾರ್ ಭಾಷಣ ಪಠ್ಯಪುಸ್ತಕದಿಂದ ತೆಗೆಯುವ ಪ್ರಶ್ನೆಯೇ ಇಲ್ಲ: ಬಿ.ಸಿ.ನಾಗೇಶ್

ತುಮಕೂರು: ಹತ್ತನೇ ತರಗತಿಯ ಕನ್ನಡ ಭಾಷಾ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡಗೇವಾರ್ ಅವರ ಭಾಷಣವನ್ನು ಸೇರಿಸಿರುವುದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಮರ್ಥಿಸಿಕೊಂಡಿದ್ದಾರೆ.

ಆರ್‌ಎಸ್‌ಎಸ್ ಸಿದ್ಧಾಂತ ಉತ್ತೇಜಿಸುವುದರ ಮೇಲೆ ನಮ್ಮ ಗಮನ ಕೇಂದ್ರೀಕೃತವಾಗಿದೆ, ಇದರಿಂದ ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ರಾಷ್ಟ್ರೀಯತೆಯಿಂದ ಸ್ಫೂರ್ತಿ ಪಡೆಯಬಹುದು. ನಮ್ಮ ನಡೆಯನ್ನು ಟೀಕಿಸುವವರು ಮೊದಲು ವಿಷಯವನ್ನು ಪರಿಶೀಲಿಸಿ ನಂತರ ಚರ್ಚೆಗೆ ಬರಲಿ ಎಂದು ಅವರು ಹೇಳಿದರು.

ಪಠ್ಯಪುಸ್ತಕದಲ್ಲಿ ಹೆಡಗೇವಾರ್ ಭಾಷಣ ಇರುವುದಕ್ಕೆ ಕೆಲವರು ವಿರೋಧ  ವ್ಯಕ್ತಪಡಿಸಿದ್ದಾರೆ. ಅದನ್ನು ತೆಗೆಯುವ ಪ್ರಶ್ನೆಯೇ ಇಲ್ಲ. ಪುಸ್ತಕ ಈಗಾಗಲೇ ಮುದ್ರಣಕ್ಕೆ ಹೋಗಿದೆ. ಯುವ ಮನಸ್ಸುಗಳು ಕೇವಲ ವ್ಯಕ್ತಿಗಳನ್ನು ಆದರ್ಶವಾಗಿ ತೆಗೆದುಕೊಳ್ಳುವ ಬದಲು ಸ್ಫೂರ್ತಿದಾಯಕವಾದ ಸಿದ್ಧಾಂತವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಭಗತ್ ಸಿಂಗ ಪಠ್ಯ ಬಿಟ್ಟಿಲ್ಲ: ಭಗತ್ ಸಿಂಗ್ ಕುರಿತ ವಿಷಯವನ್ನು ಪಠ್ಯಪುಸ್ತಕಗಳಿಂದ ತೆಗೆದುಹಾಕಲಾಗಿದೆ ಎಂಬುದು ಸುಳ್ಳು, ಕೆಲವರು ಪಠ್ಯಪುಸ್ತಕಗಳಲ್ಲಿ ತಮ್ಮದೇ ಆದ ಸಿದ್ಧಾಂತವನ್ನು ಸೇರಿಸಲು ಬಯಸುತ್ತಿರುವುದರಿಂದ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಅವರು ಹೇಳಿದರು.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

3 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

19 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

31 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago