ತುಮಕೂರು: ನೆನ್ನೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಪುತ್ರ ಮೋಹನ್ ಕುಮಾರ್ ಸಿ.ಎಸ್ (16) ಮೃತ ವಿದ್ಯಾರ್ಥಿ.
ತುರುವೇಕೆರೆ ತಾಲ್ಲೂಕಿನ ಲೋಕಮ್ಮನಹಳ್ಳಿ ಗೇಟ್ ಬಳಿಯಿರುವ ಶ್ರೀ ಕಂಚಿರಾಯ ಸನಿವಾಸ ಪ್ರೌಢ ಶಾಲೆಯಲ್ಲಿ 10 ತರಗತಿ ಓದುತ್ತಿದ್ದ.ಸರಸ್ವತಿ ಬಾಲಕರ ಪ್ರೌಢಶಾಲಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದು ಪರೀಕ್ಷೆ ಬರೆಯುತ್ತಿದ್ದಾಗ ಮೋಹನ್ ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.