News Karnataka Kannada
Thursday, May 02 2024
ತುಮಕೂರು

ತುಮಕೂರು ವಿವಿ ಕಲಾ ಕಾಲೇಜಿಗೆ ಪ್ರವೇಶ ಆರಂಭ

Tumkur University
Photo Credit : News Kannada

ತುಮಕೂರು: ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ಬಿಎ, ಬಿಬಿಎ, ಬಿಕಾಂ, ಬಿಎಸ್‌ಡಬ್ಲ್ಯೂ ಪದವಿ ತರಗತಿಗಳ ಪ್ರಥಮ ವರ್ಷದ ಪ್ರವೇಶ ಪ್ರಕ್ರಿಯೆಯು ಆರಂಭವಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬಿಎ,ಬಿಬಿಎ, ಬಿಎಸ್‌ಡಬ್ಲ್ಯೂ ಪದವಿಗಳಿಗೆ ಯುಯುಸಿಎಂಎಸ್ ಮೂಲಕ ಅರ್ಜಿ ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಾಲೇಜಿಗೆ ಬಂದು ನೇರ ಪ್ರವೇಶ ಪಡೆಯಲು ಅವಕಾಶವಿದೆ. ಕಲಾ ವಿಭಾಗದಲ್ಲಿ ಕನ್ನಡ, ಇಂಗ್ಲಿಷ್, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ,
ಸಮಾಜಶಾಸ್ತ್ರ, ಪತ್ರಿಕೋದ್ಯಮ, ಮನಃಶಾಸ್ತ್ರ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಮುಂತಾದ ಐಚ್ಛಿಕ ವಿಷಯಗಳಿವೆ. ಕನ್ನಡ, ಇಂಗ್ಲಿಷ್, ಹಿಂದಿ, ಸಂಸ್ಕೃತ, ಉರ್ದು ಭಾಷಾವಿಷಯಗಳಿವೆ.

ಬಿ.ಕಾಂ. ಪದವಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ:
03-06-2023 ಕೊನೆಯ ದಿನವಾಗಿದೆ. ಜೂನ್ 9ರಂದು ಜ್ಯೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಜೂನ್ 14ರಂದು ಕೌನ್ಸೆಲಿಂಗ್ ನಡೆಸಿ ಪ್ರವೇಶ ನೀಡಲಾಗುವುದು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು