Categories: ತುಮಕೂರು

ಮತದಾನದ ಮಹತ್ವವನ್ನು ಅರಿತು ನಾವೆಲ್ಲರೂ ತಪ್ಪದೆ ಮತದಾನ ಮಾಡಬೇಕು- ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

ತುಮಕೂರು: ಭಾರತ ಚುನಾವಣಾ ಆಯೋಗದ ಆಶಯದಂತೆ ಮೇ 10ರಂದು ನಡೆಯುವ ಮತದಾನದ ದಿನದಂದು ಎಲ್ಲಾ ಮತದಾರರು ತಪ್ಪದೇ ಮತ ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ವತಿಯಿಂದ ಭಾನುವಾರ ಮೈದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವರ ಬೆಟ್ಟದ ಬಳಿ ಮತದಾನದ ಕುರಿತು ಮತದಾರರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರವಾಸಿ ತಾಣಗಳನ್ನು ಪೌರಾಣಿಕ, ಐತಿಹಾಸಿಕ ಸ್ಥಳಗಳ ಆಧಾರದ ಮೇಲೆ ಗುರುತಿಸಲಾಗಿದೆ. ಪ್ರವಾಸೋಧ್ಯಮ ಇಲಾಖೆಯಿಂದ ಆ ಸ್ಥಳಗಳನ್ನು ಅಭಿವೃದ್ದಿ ಪಡಿಸಲಾಗಿದೆ, ಪ್ರವಾಸಿ ತಾಣಗಳನ್ನು ಉಳಿಸುವುದಕ್ಕಾಗಿ ಅಲ್ಲಿ ಸ್ವಚ್ಚತೆ ಕಾಪಾಡುವುದರ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಮೇ 10ರಂದು ನಡೆಯುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನದ ಕುರಿತು ಮತದಾರರಿಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯಾದ್ಯಂತ ಸ್ವೀಪ್ ಚಟುವಟಿಕೆಗಳು ನಡೆಯುತ್ತಿವೆ. ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಇಂದು ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಸೇರಿ ಪ್ರವಾಸಿ ತಾಣವಾದ ರಾಮದೇವರ ಬೆಟ್ಟವನ್ನು ಚಾರಣ ಮಾಡಲಾಗುವುದು ಎಂದರು.

ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಮತವನ್ನು ಚಲಾಯಿಸಬೇಕು. ಮೇ 10ರಂದು ನಡೆಯುವ ಮತದಾನದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಮೂಲಕ ಜಿಲ್ಲೆಯಲ್ಲಿ ಶೇಕಡಾ ನೂರರಷ್ಟು ಮತದಾನ ಮಾಡಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕ ರಘು, ಜಿಲ್ಲಾ ನಿರ್ಮಿತಿ ಕೇಂದ್ರದ ರಾಜಶೇಖರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಅಭಿವೃದ್ಧಿ) ಅಥಿಕ್ ಪಾಷ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಗ್ರಾಮೀಣ ಕುಡಿಯುವ ನೀರು ವಿಭಾಗದ ಕಾರ್ಯಪಾಲಕ ಅಭಿಯಂತರ ರವೀಶ್, ಸ್ವೀಪ್ ಸಮಿತಿ ಸಹಾಯಕ ನೋಡೆಲ್ ಅಧಿಕಾರಿ ಜಿ. ಆರ್. ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಯಪಾಲ್, ತಾಲೂಕ್ ಪಂಚಾಯತ್ ಎಡಿ ಮಂಜುನಾಥ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಿಡಿಒ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

7 mins ago

ಬಿಜೆಪಿ ಮತ್ತೆ ಗೆದ್ದರೆ ವಿಪಕ್ಷಗಳ ನಾಯಕರು ಜೈಲು ಪಾಲಾಗುತ್ತಾರೆ: ಕೇಜ್ರಿವಾಲ್‌

ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ…

11 mins ago

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

35 mins ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

43 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

49 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

1 hour ago