Categories: ತುಮಕೂರು

ತುಮಕೂರಿನಲ್ಲಿ ಬಿಜೆಪಿಯಿಂದ ಬಿಎಸ್ ವೈ ಹುಟ್ಟುಹಬ್ಬಾಚರಣೆ

ತುಮಕೂರು: ತುಮಕೂರು ಬಿಜೆಪಿ ನಗರ ಮಂಡಲದ ವತಿಯಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 80ನೇ ವರ್ಷದ ಹುಟ್ಟು ಹಬ್ಬ ಹಾಗೂ ಬಿಜೆಪಿ ಪಕ್ಷದ ವಿಜಯ ರಥ ಯಾತ್ರೆಯ ಉದ್ಘಾಟನೆ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್ ಅವರ ಅಧ್ಯಕ್ಷತೆಯಲ್ಲಿ ನಗರದ ಆರ್.ಟಿ.ಓ ಕಚೇರಿ ಅವರಣದಲ್ಲಿರುವ ಅಭಯ ಆಂಜನೇಯ ಸ್ವಾಮೀಜಿ ದೇವಾಲಯ ಬಳಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ರಾಜ್ಯದಲ್ಲಿ 4-5 ದಶಕಗಳ ಕಾಲ ಬಿಜೆಪಿಗೆ ಶಕ್ತಿಯಾಗಿ ಕೆಲಸ ಮಾಡಿದವರು ಬಿ.ಎಸ್.ಯಡಿಯೂರಪ್ಪ, ರೈತ ಹೋರಾಟಗಾರರಾಗಿ ತಮ್ಮ ಹೋರಾಟ ಆರಂಭಿಸಿ, ಹಂತ ಹಂತವಾಗಿ ಬೆಳೆದು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಅಭಿವೃದ್ದಿಯತ್ತ ಮುನ್ನೆಡೆಸಿದ್ದಾರೆ. ಸೈಕಲ್ ಹತ್ತಿ ಹೋರಾಟ ನಡೆಸಿ, ದಕ್ಷಿಣ ಭಾರತದಲ್ಲಿ ಬಿಜೆಪಿ ಖಾತೆ ತೆರೆಯಲು ಕಾರಣರಾಗಿದ್ದಾರೆ. ಬಿಜೆಪಿಯ ಲ್ಲಿರುವ ನನ್ನಂತಹ ಅನೇಕ ಜನರ ರಾಜಕೀಯ ಜೀವನಕ್ಕೆ ಯಡಿಯೂರಪ್ಪ ಕಾರಣ.ಹಾಗಾಗಿ ಇಂದು ಅಭಿಮಾನ ದಿಂದ ಅವರ ಹುಟ್ಟು ಹಬ್ವವನ್ನು ಆಚರಿಸುತ್ತಿದ್ದೇವೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರವಿಹೆಬ್ಬಾಕ ಮಾತನಾಡಿ, ಇಂದು ಜಿಲ್ಲೆಯಾದ್ಯಂತ ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರ 80ನೇ ಹುಟ್ಟು ಹಬ್ಬವನ್ನು ಬಹಳ ಸಂಭ್ರಮದಿಂದ ಮಾಡುತ್ತಿದ್ದೇವೆ. ಇದೇ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹುಟ್ಟು ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಅವರು, ಯಡಿಯೂರಪ್ಪ ಅವರ ರಾಜಕೀಯ ಕರ್ಮ ಭೂಮಿ ಶಿವಮೊಗ್ಗದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣ ಉದ್ಘಾಟಿಸುವ ಮೂಲಕ ಆಚರಿಸುತ್ತಿದ್ದಾರೆ. ಇದು ನಮಗೆ ಹೆಮ್ಮೆಯ ವಿಷಯ. ಬಿ.ಎಸ್.ವೈ ಅವರ ಮಾರ್ಗದರ್ಶನ ಇನ್ನೂ ಹತ್ತಾರು ವರ್ಷಗಳ ಕಾಲ ಪಕ್ಷಕ್ಕೆ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಬೆಳ್ಳಾವೆಯ ಶ್ರೀಕಾರದ ವೀರಬಸವ ಸ್ವಾಮೀಜಿ ಮಾತನಾಡಿ, ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅವರ ಕೆಲಸ ಶ್ಲಾಘನೀಯ. ರೈತನಾಯಕನಾಗಿ ಪಕ್ಷದಲ್ಲಿ ಗುರುತಿಸಿಕೊಂಡು ತಮ್ಮ ವರ್ಚ್ಚಿಸಿನಿಂದಲೇ ಒಂದೊಂದೇ ಮೆಟ್ಟಿಲು ಹತ್ತಿ, ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದವರು. ಇಂತಹ ವ್ಯಕ್ತಿಯ ಜನ್ಮ ದಿನವನ್ನು ನಾವೆಲ್ಲರೂ ಬಹಳ ಖುಷಿಯಿಂದಲೇ ಆಚರಿಸುತ್ತಿದ್ದೇವೆ. ಅವರು ಇನ್ನೂ ಹತ್ತಾರು ವರ್ಷ ಆರೋಗ್ಯದಿಂದ ಬದುಕುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಎಂ.ಎಲ್.ಸಿ. ಡಾ.ಹುಲಿನಾಯ್ಕರ್, ಶಿವಪ್ರಸಾದ್, ಕೊಪ್ಪಲ್ ನಾಗರಾಜು, ನಗರ ಮಂಡಲ ಅಧ್ಯಕ್ಷ ಹನುಮಂತರಾಜು, ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನಯ್ಯ, ಸಿ.ಎನ್.ರಮೇಶ್, ವಿಷ್ಣುವರ್ಧನ್, ಮಂಜುನಾಥ್, ಕೆ.ಪಿ.ಮೆಹೇಶ್, ವೇದಮೂರ್ತಿ, ರಾಜೀವ್, ಗಣೇಶ್, ವಿರುಪಾಕ್ಷಪ್ಪ, ಆಟೋ ಯಡಿಯೂರಪ್ಪ, ಕುಮಾರ್, ಸರೋಜಗೌಡ, ರಾಧಮ್ಮ, ಸೌಮ್ಯ, ಲತಾ, ಕಮಲಮ್ಮ, ಜ್ಯೋತಿ, ಹನುಮಂತರಾಯಪ್ಪ, ಬಂಬು ಮೋಹನ್, ನಾಗೇಂದ್ರ ಚನ್ನಬಸಪ್ಪ, ಯಶಸ್, ಟಿ.ಡಿ.ವಿನಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶ್ರೀ ಅಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ, ರಾಜ್ಯ ಸರಕಾರದ ಅಭಿವೃದ್ದಿ ಕಾರ್ಯಗಳನ್ನು ಬಿಂಬಿಸುವ ವಿಜಯ ರಥಯಾತ್ರೆಗೆ ಚಾಲನೆ ನೀಡಲಾಯಿತು. ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು.

Sneha Gowda

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

13 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

56 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

58 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago