News Karnataka Kannada
Friday, April 19 2024
Cricket
ತುಮಕೂರು

ಬಾಲ್ಯ ವಿವಾಹ, ಬಾಲ ಕಾರ್ಮಿಕತೆ ಸಮಾಜಕ್ಕೆ ಕಂಟಕಪ್ರಾಯ: ಸಾ.ಚಿ.ರಾಜಕುಮಾರ

Child marriage, child labour a menace to society: S.C. Rajkumar
Photo Credit : News Kannada

ತುಮಕೂರು: ಬಾಲ್ಯ ವಿವಾಹ, ಬಾಲ ಕಾರ್ಮಿಕತೆ ಇವೆಲ್ಲ ಬೆಳೆಯುವ ಯುವಕ-ಯುವತಿಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಸಮಾಜಕ್ಕೆ ಕಂಟಕಪ್ರಾಯವಾಗಿರುವ ಇಂತಹ ಆಚರಣೆಗಳಿಂದ ಯುವ ಜನತೆ ದೂರ ಉಳಿಯಬೇಕು ಎಂದು ವರದಕ್ಷಿಣೆ ವಿರೋಧಿ ವೇದಿಕೆ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ ಸಲಹೆ ನೀಡಿದರು.

ಜನಶಿಕ್ಷಣ ಸಂಸ್ಥೆ, ವಾಸವಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹದಿಹರೆಯದವರಿಗೆ ಜಾಗೃತಿ ಕಾರ್ಯಕ್ರಮ, ಪೋಕ್ಸೋ ದುಷ್ಪರಿಣಾಮಗಳ ಅರಿವು ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ಮಾತನಾಡಿದ ಅವರು, ಕೋವಿಡ್ ನಂತರದ ದಿನಗಳು ಎಲ್ಲರನ್ನೂ ಬಾಧಿಸುತ್ತಿವೆ. ಅದರಲ್ಲೂ ವಿಶೇಷವಾಗಿ ಮಕ್ಕಳ ಮೇಲೆ ಸಾಕಷ್ಟು ಮಾನಸಿಕ ಪರಿಣಾಮ ಉಂಟು ಮಾಡಿದೆ. ಸಾಮಾಜಿಕ ಜಾಲತಾಣಗಳು ಯುವ ಜನತೆಯನ್ನು ಬೇರೊಂದು ಕಡೆಗೆ ಕೊಂಡೊಯ್ಯುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದರು.

ಕಳೆದ ಮೂರ್‍ನಾಲ್ಕು ವರ್ಷಗಳ ಅಂಕಿ ಅಂಶಗಳನ್ನು ಅವಲೋಕಿಸಿದರೆ ಬಾಲ್ಯ ವಿವಾಹಗಳು, ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿರುವುದನ್ನು ಕಾಣಬಹುದಾಗಿದೆ. 18 ವರ್ಷದೊಳಗಿನ ವಿವಾಹಗಳಿಗೆ ಕಾನೂನಿನ ಮಾನ್ಯತೆ ಇಲ್ಲ. ಆದರೂ ವಿವಾಹಗಳು ನೆರವೇರುತ್ತಿವೆ ಎಂದರೆ ಎಲ್ಲಿ ತಪ್ಪುಗಳಾಗುತ್ತಿವೆ ಎಂಬುದನ್ನು ಹುಡುಕಬೇಕು. ಇಷ್ಟೆಲ್ಲಾ ಶಿಕ್ಷಣದ ಅರಿವೂ ಇದ್ದರೂ ಬಾಲ್ಯ ವಿವಾಹಗಳು ನೆರವೇರುತ್ತಿರುವುದು ಅತ್ಯಂತ ಅಪಾಯಕಾರಿ. ಪೋಕ್ಸೋ ಪ್ರಕರಣಗಳಿಗೆ ಸಿಲುಕಿ ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿರುವ ಉದಾಹರಣೆಗಳು ಸಾಕಷ್ಟಿವೆ. ಈ ಬಗ್ಗೆ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚು ಜಾಗೃತಿ ವಹಿಸಬೇಕು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಜನಶಿಕ್ಷಣ ಸಂಸ್ಥೆ ನಿರ್ದೇಶಕಿ ಆರ್.ಎಚ್.ಸುಕನ್ಯ ಮಾತನಾಡಿ ವಿದ್ಯಾರ್ಥಿಗಳು ಕುಶಲತೆಯ ಕಡೆಗೆ ಹೆಚ್ಚು ಗಮನ ಹರಿಸಬೇಕು. ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯ ಇಲ್ಲದೆ ಹೋದರೆ ಬದುಕು ರೂಪಿಸಿಕೊಳ್ಳುವುದು ಕಷ್ಟವಾಗಲಿದೆ ಎಂದರು.

ಜನಶಿಕ್ಷಣ ಸಂಸ್ಥೆಯು ಆಜಾದಿಕ ಅಮೃತ ಮಹೋತ್ಸವ ಅಂಗವಾಗಿ ಜಿ.20 ಜನಭಾಗಿಧಾರಿ -ಕೌಶಲ್ಯ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ವಿದ್ಯಾರ್ಥಿಗಳಿಗೂ ಕೌಶಲ್ಯ ತರಬೇತಿ ನೀಡಲಾಗುತ್ತದೆ. ಆಸಕ್ತರು ಮುಂದೆ ಬಂದು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದರು.

ಗಣಿತ ಶಿಕ್ಷಕರಾದ ಜಿ. ಹನುಮಂತಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಾಸವಿ ಸಂಸ್ಥೆಯ ಸಂಚಾಲಕ ಎನ್.ಎನ್.ಶ್ರೀಧರ್, ಇತಿಹಾಸ ಉಪನ್ಯಾಸಕ ಗೋವಿಂದರಾಜು, ದೈಹಿಕ ಶಿಕ್ಷಕ ವಿನೋದ್ ಕುಮಾರ್, ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ಬಾಬು, ಇಂಗ್ಲೀಷ್ ಉಪನ್ಯಾಸಕಿ ಸಂಧ್ಯಾ, ಅರ್ಥಶಾಸ್ತ್ರ ಉಪನ್ಯಾಸಕಿ ದೀಪ, ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು