Categories: ತುಮಕೂರು

ಡಿ.ಕೆ ಶಿವಕುಮಾರ್ ಗೆ ಬಂಧನದ ಭೀತಿ, ಸಿದ್ದರಾಮಯ್ಯಗೆ ಸೋಲಿನ ಆತಂಕ: ಕಟೀಲ್‌

ತುಮಕೂರು: ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ಎದುರಿಸಲು ಶಸ್ತ್ರಾಸ್ತ್ರಗಳಿಲ್ಲದೇ ಶಕ್ತಿ ಕಳೆದುಕೊಂಡಿದೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌  ಕುಮಾರ್ ಕಟೀಲ್ ತಿಳಿಸಿದರು.

ನಗರದ ಬಿಜೆಪಿ‌ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿರುವ ನಾಯಕರು ಗೊಂದಲದಲ್ಲಿದ್ದಾರೆ. ಡಿ.ಕೆ ಶಿವಕುಮಾರ್ ಬಂಧನದ ಭೀತಿಯಲ್ಲಿ ಇದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸೋಲಿನ ಭೀತಿಯಲ್ಲಿ ಇದ್ದಾರೆ. ಇನ್ನೂ ಕಾಂಗ್ರೆಸ್ ನ ರಾಷ್ಷ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚಂಚಲ ಮನಸ್ಸು ಹೊಂದಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಲ್ಲಿ ಗೊಂದಲವನ್ನು ಸೃಷ್ಟಿ ಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಗ್ಯಾರಂಟಿ ಇಲ್ಲ, ಇನ್ನೂ ಕಾಂಗ್ರೆಸ್ ಪಕ್ಷ ನೀಡುತ್ತಿರುವ ಗ್ಯಾರಂಟಿ ಕಾರ್ಡ್ ಗಳಿಗೆ ಗ್ಯಾರಂಟಿ ಇರುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ದೇಶದಲ್ಲಿ ಅಭಿವೃದ್ಧಿಪರ,ಜನರು,ಕೂಲಿ ಕಾರ್ಮಿಕರು,ಬಡವರು,ರೈತರು ಸೇರಿದಂತೆ ಅಸಂಘಟಿತ ಕಾರ್ಮಿಕ ವರ್ಗದ ಅಭಿವೃದ್ಧಿಗೆ ಸೌಲಭ್ಯಗಳನ್ನು ಒದಗಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರಕಾರಕ್ಕೆ ಜನತೆ ಮನ್ನಣೆ ಕೊಡಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ರಾಜ್ಯ ವಿಧಾನ ಸಭಾ ಚುನಾವಣೆ ನೆಡೆಯುತ್ತಿದ್ದು, ಈ ಬಾರಿ ಹೆಚ್ಚು ಬಿಜೆಪಿ ಅಭ್ಯರ್ಥಿಗಳು ಆಯ್ಕೆ ಆಗುವ ಮೂಲಕ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಭರವಸೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಸದ ಜಿ.ಎಸ್ ಬಾವರಾಜು,ಶಾಸಕ ಜಿ.ಬಿ ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಮುಂತಾದವರು ಇದ್ದರು.

Sneha Gowda

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago