ತುಮಕೂರು

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ: ಡಾ. ಜಿ. ಪರಮೇಶ್ವರ್

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಅವರು ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಗೆಲುವಿಗೆ ಶುಭ ಸೂಚನೆಯಾಗಿದೆ. ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಅವರು ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಜನರ ಕಷ್ಟ-ಸುಖಗಳಿಗೆ ಸ್ಪಂದಿಸಿರುವುದೇ ನನ್ನ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ದಲಿತ ಮುಖ್ಯಮಂತ್ರಿ ಕೂಗಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ನಾನು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಏಕೈಕ ಗುರಿಯಾಗಿದೆ. ಪಕ್ಷ ಬಹುಮತದೊಂದಿಗೆ ಗೆಲುವು ಸಾಧಿಸಿದ ಬಳಿಕ ಮುಖ್ಯಮಂತ್ರಿ ವಿಚಾರ ಮುನ್ನೆಲೆಗೆ ಬರಲಿದೆ ಎಂದರು.

ಸಿಎಂ ಗೆ ತಿರುಗೇಟು
ಕಾಂಗ್ರೆಸ್ ಮುಳುಗುವ ಹಡಗು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೇ ೧೩ ರಂದು ಯಾವ ಪಕ್ಷ ಮುಳುಗುವ ಹಡಗು ಎಂಬುದು ತಿಳಿಯುತ್ತದೆ, ಕಾದುನೋಡಿ ಎಂದು ತಿರುಗೇಟು ನೀಡಿದರು.

ಈ ಹಿಂದೆ ಲಕ್ಷ್ಮಣ ಸವದಿಯವರು ಸದನದಲ್ಲಿ ಬ್ಲೂ ಫಿಲಂ ನೋಡಿದಂತಹ ಸಂದರ್ಭದಲ್ಲಿ ನೀವೇ ಅವರ ವಿರುದ್ಧ ಟೀಕೆ ಮಾಡಿದ್ರಿ. ಆದರೆ ಈಗ ಅವರ ಮನೆಗೆ ಹೋಗಿ ಅವರನ್ನೆ ಸ್ವಾಗತ ಮಾಡಿರುವುದು ಸರಿಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಪಕ್ಷವೇ ಅವರನ್ನು ಮನ್ನಿಸಿ ಉನ್ನತ ಹುದ್ದೆಗಳನ್ನು ನೀಡಿತ್ತು. ಅವರಿಗೂ ಸಾರ್ವಜನಿಕ ಜೀವನದಲ್ಲಿ ಇಂತಹ ತಪ್ಪುಗಳ ಅರಿವಾಗಿರುವುದರಿಂದ ಮನ್ನಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago