ತುಮಕೂರು: ನನಗೆ ಹೈಕಮಾಂಡ್ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ಬೇಡ ಅನ್ನುವುದಕ್ಕೆ ಆಗುತ್ತದಾ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ಶಾಸಕಾಂಗ ಸಭೆಯಲ್ಲಿ ಶಾಸಕರು ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದ ರೇಸ್ ನಲ್ಲಿ ಹಲವು ಮಂದಿ ಇದ್ದಾರೆ. ಅವರಲ್ಲಿ ಯಾರಿಗೆ ಕೊಡಬೇಕು ಎಂಬುದನ್ನು ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನ ನೀಡುವುದು ಬಿಡುವುದು ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದೆ. ಶಾಸಕಾಂಗ ಸಭೆಯ ತೀರ್ಮಾನವೇ ಅಂತಿಮ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾವು ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ.