Categories: ತುಮಕೂರು

ಸಿಎಂ ಸಿದ್ದರಾಮಯ್ಯ ನವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ್

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ದಲಿತ ನಾಯಕ ಡಾ.ಜಿ.ಪರಮೇಶ್ವರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿ ಆಯ್ಕೆ ಆಗಿದ್ದಾರೆ.

ಡಾ.ಜಿ ಪರಮೇಶ್ವರ್ ಪರಿಚಯ: ಇವರು ಆಗಸ್ಟ್ ೬,೧೯೫೧ ರಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿ ಜನಿಸಿದರು. ಅವರು ಗಂಗಮಾಳಮ್ಮ ಚಿಕ್ಕಣ್ಣ ಮತ್ತು ಮಾಜಿ ಎಂಎಲ್‌ಸಿ ಗಂಗಾಧರಯ್ಯ ಹೆಬ್ಬಾಳು ಮರಿಯಪ್ಪ ಅವರಿಗೆ ಜನಿಸಿದರು. ನಂತರ ಅವರು ಪ್ರಾಥಮಿಕ ಶಿಕ್ಷಣವನ್ನು ಗೊಲ್ಲಹಳ್ಳಿ ಮತ್ತು ತುಮಕೂರಿನ  ಹೆಗ್ಗೆರೆಯ ಸರ್ಕಾರಿ ಶಾಲೆಯಲ್ಲಿ ಮುಗಿಸಿದರು.

೧೯೫೯ರಲ್ಲಿ ತಮ್ಮ ತಂದೆ ಸ್ಥಾಪಿಸಿದ ನಗರದ ಸಿದ್ದಾರ್ಥ ಪ್ರೌಢಶಾಲೆಗೆ ಸೇರಿಕೊಂಡರು. ಬಳಿಕ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಎಸ್ಸಿ, ಬೆಂಗಳೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಕೃಷಿಯಲ್ಲಿ ಎಂ.ಎಸ್ಸಿ, ಅದೇ ಕಾಲೇಜಿನಲ್ಲಿ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಪರಮೇಶ್ವರ ಅವರು ಸಂಕ್ಷಿಪ್ತವಾಗಿ ಬೆಂಗಳೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಸ್ಯ ಶಾಸ್ತ್ರದ ವಿಭಾಗದಲ್ಲಿ ಸಂಶೋಧನಾ ಸಹಾಯಕರಾಗಿ ಕೆಲಸ ಮಾಡಿದರು.

ಅಲ್ಲದೆ ಡಾ.ಜಿ.ಪರಮೇಶ್ವರ್ ಅವರು ಈ ಬಾರಿಯೂ ಕೊರಟಗೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಇನ್ನು ಇವರಿಗೆ ಪೈಪೋಟಿ ನಡೆಸಿದ್ದ ಜೆಡಿಎಸ್‌ನ ಸುಧಾಕರ್ ಲಾಲ್ ಅವರು ೧೪,೩೪೭ ಮತಗಳ ಅಂತರದಿಂದ ಸೋಲನುಭವಿಸಿದ್ದರು. ಈ ಮೂಲಕ ತುಮಕೂರು ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಸ್ಪರ್ಧಿಸಿ ರಾಜ್ಯದ ಗಮನ ಸೆಳೆದಿದ್ದರು.

ಕಳೆದ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಕೊರಟಗೆರೆ ಎಸ್‌ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಎರಡು ಬಾರಿ ಜಯ ಸಾಧಿಸಿತ್ತು. ಹಾಗೆಯೇ ಈ ಬಾರಿಯೂ ಕೂಡ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಇನ್ನು ಜೆಡಿಎಸ್ ಒಂದು ಬಾರಿ ಮಾತ್ರ ಗೆಲುವು ಸಾಧಿಸಿದೆ. ೧೯೯೯ ಮತ್ತು ೨೦೦೪ರ ವಿಧಾನಸಭೆ ಚುನಾವಣೆಗಳಲ್ಲಿ ಜೆಡಿಎಸ್? ಪಕ್ಷದ ಸಿ.ಚನ್ನಿಗಪ್ಪ ಆಯ್ಕೆ ಆಗಿದ್ದರು.

೨೦೦೮ರ ಚುನಾವಣೆಯಲ್ಲಿ ಜೆಡಿಎಸ್‌ನ ಚಂದ್ರಯ್ಯ ವಿರುದ್ಧ ಕಾಂಗ್ರೆಸ್ ಪಕ್ಷದ ಡಾ. ಜಿ.ಪರಮೇಶ್ವರ್ ಅವರು ೧೧ ಸಾವಿರ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ೨೦೧೩ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್ ಲಾಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ. ಪರಮೇಶ್ವರ್ ಅವರನ್ನು ೧೮ ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದರು. ಇದು ಮುಖ್ಯಮಂತ್ರಿ ಹುದ್ದಗೇರುವ ಪರಮೇಶ್ವರ್ ಅವರ ಆಸೆಗೆ ಅಡ್ಡದಾರಿ ಆದಂತಾಗಿತ್ತು.

ಇನ್ನು ೨೦೧೮ರ ಚುನಾವಣೆಯಲ್ಲಿ ಜೆಡಿಎಸ್‌ನ ಸುಧಾಕರ್‌ಲಾಲ್ ಅವರು ೭೩,೯೭೯ ಮತಗಳನ್ನು ಪಡೆದರೆ, ಕಾಂಗ್ರೆಸ್‌ನ ಜಿ. ಪರಮೇಶ್ವರ್ ೮೧,೫೯೮ ಮತಗಳನ್ನು ಪಡೆದು, ೭,೬೧೯ ಮತಗಳ ಅಂತರದಲ್ಲಿ ಸುಧಾಕರ್ ಲಾಲ್ ಅವರನ್ನು ಪರಾಭವಗೊಳಿಸಿದ್ದರು. ಡಾ.ಜಿ. ಪರಮೇಶ್ವರ ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿಯೂ ಕಾರ್ಯ ನಿರ್ವಹಸಿದ್ದಾರೆ. ೧೯೯೩ ರಿಂದ ವಿವಿಧ ಆಡಳಿತಗಳಲ್ಲಿ ಹಲವಾರು ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ದಲಿತ ಮುಖಂಡರಾಗಿರುವ ಇವರು ೪ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ೧೯೮೯, ೧೯೯೯ ಮತ್ತು ೨೦೦೪ ರಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರ ಹಾಗೂ ಕ್ಷೇತ್ರ ಪುನರ್ವಿಂಗಡಣೆಯ ನಂತರ ೨೦೦೮ರಲ್ಲಿ ಕೊರಟಗೆರೆ ಕ್ಷೇತ್ರವನ್ನು ಪರಮೇಶ್ವರ ಪ್ರತಿನಿಧಿಸಿದ್ದರು.

ರಾಜ್ಯದ ದಲಿತ, ಇತರ ಪ್ರಮುಖ ಸಮುದಾಯಗಳು, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವಿಶ್ವಾಸವನ್ನು ಕೂಡ ಗಳಿಸಿದ್ದಾರೆ. ಸತತ ಎರಡು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ಇವರು ದೀರ್ಘ ಕಾಲ ಈ ಹುದ್ದೆಯನ್ನು ನಿರ್ವಹಿಸಿದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಹಾಗೆಯೆ ಇವರು ದಲಿತ ನಾಯಕರಾಗಿದ್ದು, ಇವರಿಗೆ ಡಿಸಿಎಂ ಹುದ್ದೆ ನೀಡುವಂತೆ ಒತ್ತಾಯಗಳು ಕೂಡ ಕೇಳಿಬಂದಿದ್ದವು.

Ashika S

Recent Posts

ಕಾಂಗ್ರೆಸ್‍ ನ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ: ಡಿಕೆಶಿ

ರಾಜ್ಯದಲ್ಲಿ ಜನ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಯಿಂದ ಬದುಕುತ್ತಿದ್ದಾರೆ. ನಮ್ಮ ಗ್ಯಾರಂಟಿ ಜನರನ್ನು ರಕ್ಷಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

3 mins ago

ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನಿನಲ್ಲಿ ಬಿಡುಗಡೆಗೆ ಸಿದ್ಧ

ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…

40 mins ago

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ, ಕೇಳುವುದು ಇಲ್ಲ : ಸಿಎಂ

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…

1 hour ago

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

2 hours ago

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

2 hours ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

2 hours ago