ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ನ 22ನೇ ವಾರ್ಡ್ನಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 80ಕ್ಕೂ ಹೆಚ್ಚು ಕುಕ್ಕರ್ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕುಕ್ಕರ್ಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ರಂಗನಾಥ್ ಭಾವಚಿತ್ರವಿರುವ ಕುಕ್ಕರ್ಗಳನ್ನು ಜಪ್ತಿ ಮಾಡಲಾಗಿದೆ.
ಜೆಡಿಎಸ್ ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಮಲ್ಲಿಪಾಳ್ಯದ ಬೆಟ್ಟಸ್ವಾಮಿಗೆ ಸೇರಿದ ಟಿಸಿ ರಿಪೇರಿ ಮಾಡುವ ಗೋದಾಮಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು.
ಸಂಸದ ಡಿ.ಕೆ.ಸುರೇಶ್ರಿಂದ ಈ ಕುಕ್ಕರ್ಗಳನ್ನು ಹಂಚಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.