Categories: ತುಮಕೂರು

ಹಾಲು ಕಳವು ಮಾಡಿ ವಂಚನೆ: ತನಿಖೆಗೆ ಕೆ.ಎನ್. ರಾಜಣ್ಣ ಒತ್ತಾಯ

ತುಮಕೂರು: ಮಧುಗಿರಿ ತಾಲ್ಲೂಕಿನಲ್ಲಿ ರೈತರ ಹಾಲು ಕಳವು ಮಾಡಿ ವಂಚಿಸುತ್ತಿದ್ದ ಪ್ರಕರಣದ ಬಗ್ಗೆ ಕೂಲಂಕುಷ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಆಗಬೇಕು ಎಂದು ಮಧುಗಿರಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್. ರಾಜಣ್ಣ  ಆಗ್ರಹಿಸಿದರು.

ಹಾಲು ಕಳ್ಳರಿಂದ ರೈತರಗೆ ಆಗಿರುವ ಅನ್ಯಾಯದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಗಮನಹರಿಸಿ ಸೂಕ್ತ ತನಿಖೆ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಮೇಲುಸ್ತುವಾರಿಯಲ್ಲಿ ಕೆಲಸ ಮಾಡುವಂತಹ ಮಧುಗಿರಿ ತಾಲ್ಲೂಕಿನ ಸೊಸೈಟಿಗಳಲ್ಲಿ ಹಾಲನ್ನು ಕಳ್ಳತನ ಮಾಡಿ ಹಾಲಿನ ಬದಲಾಗಿ ನೀರು ತುಂಬಿಸಿ ಕಳುಹಿಸುತ್ತಿದ್ದು, ಇದರಿಂದ ಮಧುಗಿರಿಯಲ್ಲಿ ಹಾಲು ಗುಣಮಟ್ಟವಿಲ್ಲ. ಹಾಲು ೬೦ ಪರ್ಸೆಂಟ್ ಗ್ರೇಡ್ ಬರುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇದರ ಹಿಂದಿನ ಮರ್ಮ ಏನೆಂಬುದು ಇದೀಗ ಬಯಲಾಗಿದೆ ಎಂದರು.

ನಾಗೇಶ್‌ಬಾಬು ಅವರು ಪತ್ರಿಕಾಗೋಷ್ಠಿ ನಡೆಸಿ ಮಧುಗಿರಿ ತಾಲ್ಲೂಕಿನ ಹಾಲು ಒಕ್ಕೂಟದ ಸೊಸೈಟಿಗಳಲ್ಲಿ ಆಗಿರುವ ಅನ್ಯಾಯ, ಹಾಲಿನ ವಂಚನೆ, ಕಳ್ಳತನದ ಬಗ್ಗೆ ಬಯಲಿಗೆಳೆದರು. ಆ ನಂತರ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದವರು ದೂರು ದಾಖಲು ಮಾಡಿದ್ದಾರೆ. ಮೇ ೧೭ ರಿಂದ ೨೦ರ ವರೆಗೆ ಯಾವುದೇ ದೂರು ನೀಡದೆ ವಿಳಂಬ ಮಾಡಿರುವುದನ್ನು ನೋಡಿದರೆ ಮಧುಗಿರಿ ತಾಲ್ಲೂಕಿನಲ್ಲಿ ಒಕ್ಕೂಟದ ಆಡಳಿತ ಮಂಡಳಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವಂತಹವರಿಂದ ಹಾಲು ಕಳ್ಳತನ ಮಾಡುವ ನಿರಂತರ ದಂಧೆ ನಡೆಯುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ಆರೋಪಿಸಿದರು.

ಆದ್ದರಿಂದ ಕೂಡಲೇ ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿ ಪಡಿಸುವ ಮೂಲಕ ಅನ್ಯಾಯಕ್ಕೆ ಒಳಗಾಗಿರುವ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಅವರು ಅಧಿಕಾರಿಗಳನ್ನು ಒತ್ತಾಯಿಸಿದರು.

Sneha Gowda

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

1 hour ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

2 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

2 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

2 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

2 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

2 hours ago