Categories: ತುಮಕೂರು

ನೆರೆಯವರ ಕಿರುಕುಳ: ಒಂದೇ ಕುಟುಂಬದ ಐವರ ಆತ್ಮಹತ್ಯೆ

ತುಮಕೂರು: ತುಮಕೂರಿನ ಸದಾಶಿವನಗರದಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನ ಮನೆ ಯಜಮಾನ ಗರೀಬ್‌ಸಾಬ್‌, ಆತನ ಹೆಂಡ್ತಿ ಸುಮಯಾ, ಮಕ್ಕಳಾದ ಹಾಜೀರಾ, ಮಹ್ಮಮದ್ ಶುಭಾನ್, ಮಹ್ಮದ್ ಮುನೀರ್ ಎಂದು ಗುರುತಿಸಲಾಗಿದೆ. ಇನ್ನು, ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ದಂಪತಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಹಾಸಿಗೆ ಮೇಲೆ ಮಕ್ಕಳ ಮೃತದೇಹಗಳು ಪತ್ತೆಯಾಗಿವೆ. ಇನ್ನು ಆತ್ಮಹತ್ಯೆಗೂ ಮುನ್ನ ಮನೆ ಯಜಮಾನ ಗರೀಬ್‌ಸಾಬ್‌ ವಾಟ್ಸ್ಯಾಪ್ ಮೂಲಕ ವಿಡಿಯೊ ಕಳುಹಿಸಿದ್ದಾರೆ. ತನಿಖೆ ಬಳಿಕ ಮತ್ತಷ್ಟು ವಿವರಗಳು ತಿಳಿಯಲಿವೆ. ಒಂದು ವರ್ಷದ ಹಿಂದೆ ನಗರಕ್ಕೆ ಬಂದು ವಾಸವಿದ್ದರು ಎಂದು ಹೇಳಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿಸಿದ ಗರೀಬ್​​ ಸಾಬ್​​​, ಪಕ್ಕದ ಮನೆಯವರ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗ್ತಿದ್ದೀವಿ ಅಂತ ವಿಡಿಯೋ ಮಾಡಿ ಸಾವಿನ ಮನೆ ಸೇರಿದ್ದಾರೆ. ಆತ್ಮಹತ್ಯೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು. ನಾವು ಯಾರ ತಂಟೆಗೂ ಹೋಗುತ್ತಿರಲಿಲ್ಲ. ಅಕ್ಕಪಕ್ಕದ ಮನೆಯವರು ದೌರ್ಜನ್ಯ ನೀಡುತ್ತಿದ್ದರು. ಬಡವರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ. ನಮ್ಮ ದೇಹಗಳನ್ನು ಪೋಸ್ಟ್‌ಮಾರ್ಟಂ ಮಾಡಬೇಡಿ ಎಂದು ವಿಡಿಯೊದಲ್ಲಿ ಮನವಿ ಮಾಡಿದ್ದಾರೆ.

ನಮಗೆ ಸಾಲ ಹೆಚ್ಚಾಗಿದೆ, ವ್ಯಾಪಾರದಲ್ಲಿ ಲಾಭ ಇಲ್ಲ. ಕೆಲಸಕ್ಕೆ ಹೋದರೆ ಹಣ ಬರುತ್ತಿಲ್ಲ. ಸಂಸಾರ ಮಾಡುವುದು ಕಷ್ಟವಾಗಿದೆ. ಊಟಕ್ಕೂ ತೊಂದರೆಯಾಗುತ್ತಿದೆ. ಊರಲ್ಲಿದ್ದಾಗ ಸಂಬಂಧಿಕರು ವಿಷ ಕಾರಿದರು. ಅದಕ್ಕಾಗಿ ನಗರಕ್ಕೆ ಬಂದಿದ್ದೇವೆ. ಬಾಡಿಗೆ ಮನೆಗೆ 45 ಸಾವಿರ ಅಡ್ವಾನ್ಸ್ ನೀಡಲಾಗಿದೆ. ಮೂರು ತಿಂಗಳ ಬಾಡಿಗೆ ಕೊಡೋದು ಬಾಕಿಯಿದೆ. ಉಳಿದ ಹಣವನ್ನ ನಮ್ಮ ದೊಡ್ಡಮ್ಮನಿಗೆ ವಾಪಾಸ್ ಕೊಡಿ. ನಾವು ವಾಸಿಸುವ ಮನೆಯ ಕೆಳಗಿನವರು ನಮಗೆ ತುಂಬಾ ಕಾಟ ಕೊಟ್ಟಿದ್ದಾರೆ. ನಮ್ಮ ಮನೆಯ ಕೆಳಗಿನ ಖಲಂದರ್, ಅವರ ಮಗಳು ಸಾನಿಯಾ, ಹಿರಿಯ ಮಗ, ಮಹಡಿ ಮನೆಯ ಶಬಾನಾ ಮತ್ತು ಅವಳ ಮಗಳು ಸಾನಿಯಾ ಈ ಎಲ್ಲರೂ ನಮ್ಮ ಸಾವಿಗೆ ಕಾರಣ ಎಂದಿದ್ದಾರೆ.

 

Ashitha S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

10 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

23 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

36 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

52 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago