News Karnataka Kannada
Sunday, May 12 2024
ತುಮಕೂರು

ಲೈಂಗಿಕ ಕ್ರಿಯೆ ನಿರಾಕರಿಸಿದ್ದಕ್ಕೆ ಶಿಕ್ಷಕರಿಂದಲೇ ಚಿತ್ರಹಿಂಸೆ: ಸಿಗರೇಟ್‌ನಿಂದ ಸುಟ್ಟ ಕಿರಾತಕರು

Girl tortured by teacher for refusing to have sex, burnt with blade, cigarette
Photo Credit : News Kannada

ತುಮಕೂರು: ಲೈಂಗಿಕ ಕ್ರಿಯೆಗೆ ನಿರಾಕರಿಸಿದ 9 ನೇ ತರಗತಿ ವಿದ್ಯಾರ್ಥಿಗೆ ಅಮಾನುಷವಾಗಿ ಚಿತ್ರಹಿಂಸೆ ನೀಡಿದ ಐವರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಐದು ತಿಂಗಳ ಹಿಂದೆ ತುಮಕೂರು ಜಿಲ್ಲೆಯ ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಇದೀಗ ಪ್ರಕರಣ ದಾಖಲಾಗಿದೆ. 9 ಮತ್ತು 10 ನೇ ತರಗತಿಯ ಮೂವರು ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್ ವಾರ್ಡನ್ ಮತ್ತು ಶಾಲಾ ಪ್ರಾಂಶುಪಾಲರು ವಿದ್ಯಾರ್ಥಿನಿಗೆ ಚಿತ್ರಹಿಂಸೆ ನೀಡಿದ ಆರೋಪಿಗಳು.

ಬಾಲಕಿ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ನಿರಾಕರಿಸಿದ್ದಕ್ಕೆ ಆರೋಪಿಗಳು ಸಂತ್ರಸ್ತೆಯನ್ನು ಸಿಗರೇಟ್‌ನಿಂದ ಸುಟ್ಟು, ಬ್ಲೇಡ್‌ನಿಂದ ಹಲ್ಲೆ ನಡೆಸಿ ಕಬ್ಬಿಣದ ರಾಡ್‌ ನಿಂದ ಹೊಡೆದಿದ್ದಾರೆ.

ರಾಡ್‌ನಿಂದ ಹಲ್ಲೆ ನಡೆಸಿದ ಬಳಿಕ ಬಾಲಕಿ ಪ್ರಜ್ಞಾಹೀನಳಾಗಿದ್ದು. ಬಳಿಕ ಆಕೆಗೆ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಬಾಲಕಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಆಕೆಯ ಪೋಷಕರು ದೂರು ದಾಖಲಿಸಿದ್ದಾರೆ.

ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಪ್ರಿನ್ಸಿಪಾಲ್ ಮತ್ತು ವಾರ್ಡನ್ ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು