Categories: ತುಮಕೂರು

ಗ್ಯಾರಂಟಿಗೆ ಹಣ ಕೊಟ್ಟು ಸಾಲ ಹೊರಿಸಿದ ಸರ್ಕಾರ: ಹೆಚ್ ಡಿ ಕುಮಾರಸ್ವಾಮಿ

ತುಮಕೂರು: ಐದು ಗ್ಯಾರಂಟಿ ಯೋಜನೆಗಳನ್ನೂ ಘೋಷಣೆ ಮಾಡಿ ಮಹಿಳೆಯರಿಗೆ ಎರಡು ಸಾವಿರ ರೂ. ನೀಡುವ  ಸರ್ಕಾರ ಜನರ ಮೇಲೆ ಸಾಲದ ಹೊರೆ ಹೊರಿಸಿದೆ. ಈ ವರ್ಷ ಕಾಂಗ್ರೆಸ್ ಸರ್ಕಾರ ಒಂದು ಲಕ್ಷ ಐದು ಸಾವಿರ ಕೋಟಿ ರೂ. ಸಾಲ ಮಾಡಿದೆ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಧುಗಿರಿಯಲ್ಲಿ ಶುಕ್ರವಾರ ನಡೆದ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಅವರ ಪರ ನಡೆದ ಪ್ರಚಾರ  ಸಭೆಯಲ್ಲಿ ಮಾತನಾಡಿದ ಅವರು, ಈ ಸಾಲವನ್ನು ಸಿದ್ದರಾಮಯ್ಯ ತೀರಿಸುವುದಿಲ್ಲ, ಅವರು ಅಧಿಕಾರ ಬಿಟ್ಟು ಇಳಿದ ಮೇಲೆ ಖಜಾನೆ ಖಾಲಿಯಾದಾಗ ಮುಂದೆ ಆಡಳಿತ ನಡೆಸುವವರು ಜನರ ಜೇಬಿಗೆ ಕೈ ಹಾಕಬೇಕಾಗುತ್ತದೆ. ರಾಜ್ಯದ ಪ್ರತಿ ಕುಟುಂಬದ ಮೇಲೆ ಈ ಸರ್ಕಾರ 36 ಸಾವಿರ ರೂ. ಸಾಲ ಹೇರಿದೆ ಎಂದು ಹೇಳಿದರು.

ಹೆಂಗಸರಿಗೆ ಎರಡು ಸಾವಿರ ರೂ. ನೀಡಿ, ಮದ್ಯದ ಬೆಲೆ ವಿಪರೀತ ಏರಿಕೆ ಮಾಡಿ ಸರ್ಕಾರ ಪಿಕ್ ಪಾಕೇಟ್ ಮಾಡುತ್ತಿದೆ.  ದೇಶಕ್ಕೆ ಸುಭದ್ರಾ ಸರ್ಕಾರ ಬೇಕು, ದೇಶದ ಆರ್ಥಿಕ ಸ್ಥಿತಿ ಸುಧಾರಣೆ ಆಗಬೇಕು, ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಬೇಕು. ಇದಕ್ಕೆಲ್ಲಾ ನರೇಂದ್ರ ಮೋದಿಯವರೇ ಪರಿಹಾರವೆಂದು ದೇಶದ ಜನ ಭಾವನೆ ಹೊಂದಿದ್ದಾರೆ. ಇದೇ ಕಾರಣಕ್ಕೆ ಮಾಜಿ ಪ್ರಧಾನಿ ದೇವೇಗೌಡರೂ ಮೋದಿಯವರೇ ಮತ್ತೆ ಪ್ರಧಾನಿ ಆಗಬೇಕು, ಆಗ ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಸಾಕಾರಗೊಳಿಸಲು ಸಹಕಾರ ದೊರೆಯುತ್ತದೆ ಎಂದು ಬಿಜೆಪಿ, ಜೆಡಿಎಸ್ ಜೊತೆಗೂಡಿ ಚುನಾವಣೆ ಎದುರಿಸುತ್ತಿದ್ದೇವೆ ಎಂದರು.

ಸಮರ್ಥ, ಆನುಭವಿ ನಾಯಕರಾಗಿರುವ ವಿ.ಸೋಮಣ್ಣ ಅವರನ್ನು ಈ ಚುನಾವನೆಯಲ್ಲಿ ಅತ್ಯಧಿಕ ಮತಗಳಿಂದ  ಆಯ್ಕೆ ಮಾಡಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರಲ್ಲದೆ, ಕುಂಚಿಟಿಗರ ಸಮಾಜ ಹಾಗೂ ಕಾಡುಗೊಲ್ಲ ಸಮುದಾಯದವರ ಮೀಸಲಾತಿ ಬೇಡಿಕೆ ಈಡೇರಿಸಲು ಕೇಂದ್ರದ ಸರ್ಕಾರದ ಜೊತೆಗೂಡಿ ದೇವೇಗೌಡರು ಪ್ರಯತ್ನಿಸುತ್ತಾರೆ. ಭದ್ರಾ ಮೇಲ್ದಂಡೆ ಯೋಜನೆಗೆ ಬೇಕಾಗಿರುವ ಹಣದ ವ್ಯವಸ್ಥೆ ಮಾಡಿಸಿ ಯೋಜನೆ ಪೂರ್ಣಗೊಳಿಸುವ ಪ್ರಯತ್ನ ಮಾಡುವುದಾಗಿ ಹೇಳಿದರು.

ಎನ್.ಡಿ.ಎ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ, ಭಾರತದ ಭವಿಷ್ಯ ನಿರ್ಧರಿಸುವ ಈ ಚುನಾವಣೆ  ಮಹತ್ವವಾದದ್ದು, ಮೋದಿಯವರು ಮತ್ತೆ ಪ್ರಧಾನಿ ಆಗಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡರು ಬಿಜೆಪಿ ಜೊತೆ ಸೇರಿ ಶಕ್ತಿ ತುಂಬಿದ್ದಾರೆ. ಚುನಾವಣೆಯಲ್ಲಿ ಕ್ರಮ ಸಂಖ್ಯೆ ೩ರ ಕಮಲ ಗುರುತಿಗೆ ಮತ ನೀಡಿ ತಮ್ಮನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ದೇಶದ ಭದ್ರತೆ, ಅಭಿವೃದ್ಧಿ, ಒಕ್ಕೂಟ ವ್ಯವಸ್ಥೆ ಕಾಪಾಡಲು  ಮೋದಿಯವರು ಪ್ರಧಾನಿ ಆಗಬೇಕು ಎಂಬುದು ದೇವೇಗೌಡರ ಅಭಿಲಾಷೆಯಾಗಿದೆ. ಬಿಜೆಪಿ, ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಾಗಿ ಗೆಲುವಿನ ಸಂದೇಶ ನೀಡಬೇಕು. ಇಲ್ಲಿನ ಭ್ರಷ್ಟ, ದ್ವೇಷದ ರಾಜಕಾರಣಕ್ಕೆ ಇತಿಶ್ರೀ ಹಾಡಬೇಕು ಎಂದರು.

ಬಿಜೆಪಿ ಮುಖಂಡ ಎಲ್.ಸಿ.ನಾಗರಾಜು, ವಿಧಾನ ಪರಿಷತ್ ಸದಸ್ಯ ಚಿದನಂದಗೌಡ, ಮಾಜಿ ಶಾಸಕ ಸುಧಾಕರ ಲಾಲ್,  ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮುಖಂಡ ಅನಿಲ್‌ಕುಮಾರ್, ಜಿಲ್ಲಾ ಜಡಿಎಸ್ ಅಧ್ಯಕ್ಷಆರ್.ಸಿ.ಆಂಜನಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ಮುಖಂಡರಾದ ಅನಿಲ್‌ಕುಮಾರ್, ಎಸ್.ಪಿ.ಚಿದಾನಂದ್, ಶಿವಪ್ರಸಾದ್, ಕೊಂಡವಾಡಿ ಚಂದ್ರಶೇಖರ್, ನಾಗೇಂದ್ರ ಮೊದಲಾದವರು ಭಾಗವಹಿಸಿದ್ದರು.

Ashika S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago