Categories: ತುಮಕೂರು

ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ, ಆದರೆ ನಾನು ಹೋಗಲ್ಲ: ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು: ಲಿಂಗೈಕ್ಯ, ಪರಮ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 5ನೇ ವರ್ಷದ ಪುಣ್ಯ ಸ್ಮರಣೆ ಇರುವ ಕಾರಣ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನಾನು ಹೋಗಲು ಆಗುವುದಿಲ್ಲ ಎಂದು ಸಿದ್ದಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಅವರು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಯ್ಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ನನಗೂ ಕೂಡ ಆಹ್ವಾನ ಬಂದಿದೆ. ಆದರೆ ನಾನು ಹೋಗಲು ಆಗುವುದಿಲ್ಲ ಎಂದರು. ಉದ್ಘಾಟನೆಯ ಮುನ್ನ ದಿನವೇ ಅಂದರೆ ಜನವರಿ 20ರಂದು ಬಂದು ಅಯೋಧ್ಯೆಯಲ್ಲಿ ತಂಗುವಂತೆ ಮನವಿ ಮಾಡಿದ್ದಾರೆ. ಭದ್ರತಾ ದೃಷ್ಟಿಯಿಂದ ಜನವರಿ 23 ರಂದೇ ಹಿಂದಿರುಗಲು ಹೇಳಿದ್ದಾರೆ. ಆದರೆ ನಾನು ಹೋಗಲು ಆಗುತ್ತಿಲ್ಲ. ಕಾರಣ, ಜನವರಿ 21ರಂದು ಡಾ. ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಇದೆ. ಈ ಕಾರಣದಿಂದಾಗಿ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ ಎಂದರು.

ಶ್ರೀ ಸಿದ್ದಗಂಗಾ ಮಠದಿಂದ ರಾಮ ಮಂದಿರ ಉದ್ಘಾಟನೆ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿ ಪತ್ರವನ್ನು ಕಳುಹಿಸಿಕೊಡಲಾಗಿದೆ ಎಂದು ಸ್ವಾಮೀಜಿ ಹೇಳಿದರು.

Gayathri SG

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago