Categories: ತುಮಕೂರು

ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರ ಸೋಲಿಗೆ ಕಾರಣ ನಾನೇ: ಮಾಜಿ ಶಾಸಕ ಕೆ.ಎನ್ ರಾಜಣ್ಣ

ತುಮಕೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸದಿದ್ದರೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮುಗಿಸುತ್ತಿದ್ದರು ಎಂದು ಮಾಜಿ ಶಾಸಕ ಕೆ.ಎನ್ ರಾಜಣ್ಣ ಹೇಳಿದರು.

ಕೊರಟಗೆರೆಯ ರಾಜೀವ ಭವನದ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ,ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಪ್ರಮುಖ ಕಾರಣ ಇದೆ. ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ನೆಲಸಮ ಮಾಡುತ್ತಾರೆ ಎಂಬ ಕಾರಣದಿಂದ ದೇವೇಗೌಡರನ್ನು ಚುನಾವಣೆಯಲ್ಲಿ ಸೋಲಿಸಬೇಕಾಯಿತು ಎಂದರು.

ನನ್ನ ವಿರುದ್ಧ ಮಧುಗಿರಿಯಲ್ಲಿ ಹೇಳಿಕೆ ಕೊಡಲಿ ಅದನ್ನು ಬಿಟ್ಟು ಹಗಲು ರಾತ್ರಿ ದೇವೇಗೌಡರನ್ನು ಗೆಲ್ಲಿಸಲು ಹೋರಾಡಿದ ಪರಮೇಶ್ವರ್ ಅವರನ್ನು ಸೋಲಿಸಿ ಎಂದು ಕಣ್ಣೀರು ಹಾಕುತ್ತಾರೆ ಎಂದರೆ ಎಂತಹ ಡ್ರಾಮಾ ಎನ್ನುವುದನ್ನು ಜನರು ಅರಿಯಬೇಕು ಎಂದು ಮಾಜಿ ಜನರಿಗೆ ತಿಳಿಸಿದರು.

ಜೆಡಿಎಸ್ ಜಾತಿಗೆ ಸೀಮಿತವಾಗಿದ್ದು, ಬಿಜೆಪಿ ಭ್ರಷ್ಟರ ಪಕ್ಷ ಎನ್ನುವುದರಲ್ಲಿ ಅನುಮಾನವಿಲ್ಲ, ಜನಪರವಾಗಿ ಕೆಲಸ ಮಾಡದ ಭ್ರಷ್ಟರನ್ನು ಪಕ್ಷಕ್ಕೆ ಸೇರಿಸಿಕೊಂಡು ಭ್ರಷ್ಟಾಚಾರಕ್ಕೆ ಇಂಬು ನೀಡುತ್ತಿದೆ ಎಂದ ಅವರು, ನಾಟಕದ ಕಂಪನಿ ಹುಟ್ಟು ಹಾಕಿರುವುದೇ ಜೆಡಿಎಸ್, ಕುಟುಂಬದವರನ್ನೇ ಸೇರಿಸಿಕೊಂಡು ಕಣ್ಣೀರು ಹಾಕುತ್ತಾರೆ ಎಂದು ವ್ಯಂಗ್ಯವಾಡಿದರು.

Sneha Gowda

Recent Posts

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ…

6 hours ago

ಪ್ರಜ್ವಲ್ ರೇವಣ್ಣ ಉಚ್ಚಾಟನೆ : ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ

ಪ್ರಜ್ವಲ್ ರೇವಣ್ಣ ಉಚ್ಚಾಟನೆ ಬಗ್ಗೆ ಮಾಜಿ ಸಿಎಂ ಕುಮಾರ ಸ್ವಾಮಿ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ್ದು, ನಿನ್ನೆಯೇ ಈ ಬಗ್ಗೆ ನಮ್ಮ…

6 hours ago

ಬಿಜೆಪಿ ಅಭ್ಯರ್ಥಿ ಜೈಲಿಗೆ ಹೋಗುವ ದಿನಕ್ಕೆ ಕ್ಷಣಗಣನೆ : ಪ್ರಿಯಾಂಕಾ ಗಾಂಧಿ

ಒಲಿಂಪಿಕ್ಸ್ ಆಟಗಾರರ ಮೇಲೆ ಕಿರುಕುಳವಾಗಿತ್ತು, ಮಹಿಳೆಯ ಮೇಲೆ ಅತ್ಯಾಚಾರವಾಗಿತ್ತು. ಆಗ ಪ್ರಧಾನಿ ಮೋದಿ‌ ಸುಮ್ಮನೆ ಇದ್ದರಲ್ಲದೆ ಇಂದು ಕರ್ನಾಟಕದಲ್ಲಿ ಸಾವಿರಾರು…

6 hours ago

ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದ ಕಾರ್ಯಕರ್ತರು

ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು…

6 hours ago

ದೇಶ ಭಕ್ತಿಯನ್ನು ಮೋದಿಯವರಿಗೆ ಗುತ್ತಿಗೆ ಕೊಟ್ಟಿಲ್ಲ: ಲಕ್ಷ್ಮಣ ಸವದಿ

ದೇಶ ಭಕ್ತಿಯನ್ನು ಈ ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ ಎಂದು ಮಾಜಿ ಮುಖ್ಯಮಂತ್ರಿ…

6 hours ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ…

6 hours ago