ತುಮಕೂರು: ಕೆಎಸ್ಆರ್ಟಿಸಿ ಮತ್ತು ಕಾರಿನ ನಡುವೆ ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಹೊನ್ನವಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಶಿವಮೊಗ್ಗದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದು, ತುಮಕೂರಿನಿಂದ ಅರಸೀಕೆರೆ ಕಡೆಗೆ ಹೋಗುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿವೆ.