News Karnataka Kannada
Sunday, April 28 2024
ತುಮಕೂರು

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 9.44 ಲಕ್ಷ ರೂ. ಅಕ್ರಮ ನಗದು ವಶ

Model Code of Conduct violation: Rs 9.44 lakh fine Illegal cash seized
Photo Credit : News Kannada

ತುಮಕೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕೊರಟಗೆರೆ ಹಾಗೂ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ ಏಪ್ರಿಲ್15ರಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 9442670 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಪ್ರಿಲ್ ೧೫ರಂದು ಕೆಎ-02-ಎಇ-150 ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ 194270 ರೂ. ನಗದು ದೊರೆತಿದ್ದು, ವಾಹನದಲ್ಲಿದ್ದ ಮರೇಗೌಡ ಬಿನ್ ರಾಮೇಗೌಡ ಅವರನ್ನು ವಿಚಾರಿಸಿದಾಗ ಸಮಂಜಸವಾದ ಉತ್ತರವನ್ನು ನೀಡದೇ ಇರುವುದರಿಂದ ನಿಯೋಜಿತ ಪೊಲೀಸ್ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಅದೇ ರೀತಿ ಮಧುಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಮುದ್ದೇನಹಳ್ಳಿ ಚೆಕ್‌ಪೋಸ್ಟ್ ಬಳಿ ಚಿತ್ತಗುಂಟ ವೇಣುಗೋಪಾಲ ರೆಡ್ಡಿ ಬಿನ್ ವೆಂಕಟರೆಡ್ಡಿ ಎಂಬುವವರ ವಾಹನವನ್ನು ತಪಾಸಣೆ ನಡೆಸಿದಾಗ ೭,೫೦,೦೦೦ ರೂ.ಗಳನ್ನು ದಾಖಲೆ ಇಲ್ಲದೆ ಅಕ್ರಮವಾಗಿ ಹೊಂದಿರುವುದು ಕಂಡು ಬಂದಿದ್ದರಿಂದ ಅನುಮಾನದ ಮೇರೆಗೆ ಸದರಿ ವಾಹನ ಮತ್ತು ಹಣವನ್ನು ಪೊಲೀಸ್ ಠಾಣೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು